ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿರುವುದಾಗಿ ಹೇಳಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಚಂದ್ರಮಾವಿನ ಕೊಪ್ಪಲು ಬಳಿಯಲ್ಲಿ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಅಪರಿಚಿತ ವ್ಯಕ್ತಿಯ ತಲೆಗೆ ಗಂಭೀರವಾದಂತ ಗಾಯವಾಗಿದೆ.
ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಕಂಡಂತ ಸ್ಥಳೀಯರು ಆತನನ್ನು ರಕ್ಷಿಸಿ, ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿ ಯಾರು ಎನ್ನುವುದು ತಿಳಿದು ಬರಬೇಕಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…
ನಿಮ್ಮ WhatsApp ಸಂದೇಶಗಳು 24 ಗಂಟೆಗಳಲ್ಲಿ ಸ್ವಯಂ ಡಿಲಿಟ್ ಆಗಬೇಕೇ? ಹೀಗೆ ಮಾಡಿ ಸಾಕು








