ಮೈಸೂರು: ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ಪತ್ನಿ ಮೇಲೆ ಗಂಡನೇ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಹೆಚ್ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತನ್ನ ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿ ಹಲ್ಲೆ ಮಾಡಿದ್ದಾನೆ.
ಚಂದ್ರು ಎಂಬಾತ ತನ್ನ ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಇದಕ್ಕೆ ಮಾವ ರಾಮೇಗೌಡ ಮತ್ತು ಅತ್ತೆ ಕೆಂಪಮ್ಮ ಕುಮ್ಮಕ್ಕೂ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮ್ಮಗೆ ಎರಡು ಹೆಣ್ಣು ಮಕ್ಕಳಿದ್ದು ಗಂಡು ಮಗು ಬೇಕು ಎಂದು ಕಿರುಕುಳ ನೀಡುತ್ತಿದ್ದರು.
ಇದೇ ಕಾರಣಕ್ಕಾಗಿ ಪ್ರತಿ ನಿತ್ಯ ಪತಿ ಮತ್ತು ಆತನ ಕುಟುಂಬಸ್ಥರು ಪತ್ನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಊರಿನ ನ್ಯಾಯ ಪಂಚಾಯಿತಿ ಕೂಡ ಹಲವು ಬಾರಿ ನಡೆದಿದೆ.
BREAKING NEWS : ಯಾದಗಿರಿಯಲ್ಲಿ ಘೋರ ದುರಂತ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ, ದಂಪತಿ ಸಜೀವ ದಹನ
ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಬೇಸತ್ತ ಶಿವಮ್ಮ ಕಿರುಕುಳ ತಾಳಲಾರದೆ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಪತಿ ಚಂದ್ರು ಬಂಧನವಾಗಿದ್ದು ಮಾವ ರಾಮೇಗೌಡ, ಅತ್ತೆ ಕೆಂಪಮ್ಮ ತಲೆ ಮರೆಸಿಕೊಂಡಿದ್ದಾರೆ. ಈ ಘಟನೆ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ
ಯಾದಗಿರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು, ದಂಪತಿ ಸಜೀವ ದಹನವಾಗಿರುವ ಘಟನೆ ನಡೆದಿದೆ.ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ದಂಪತಿ ಸಜೀವ ದಹನವಾಗಿವಾಗಿದ್ದಾರೆ. ಮೃತರನ್ನು ಪತಿ ರಾಗಯ್ಯ (39) ಹಾಗೂ ಪತ್ನಿ ಶಿಲ್ಪಾ (35) ಎಂದು ಗುರುತಿಸಲಾಗಿದೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಮ್ಮ ಮೆಟ್ರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ