ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ಮೆಂಟ್ ಒಂದರ 16ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಸಮೀಪ RMZ ಗ್ಯಾಲರಿಯ ಅಪಾರ್ಟ್ಮೆಂಟಲ್ಲಿ ನಡೆದಿದೆ.
ಬೆಂಗಳೂರಿನ ಯಲಹಂಕದ RMZ ಗ್ಯಾಲರಿಯ ಅಪಾರ್ಟ್ಮೆಂಟಲ್ಲಿ ಘಟನೆ 16ನೇ ಫ್ಲೋರ್ ನಿಂದ ಹಾರಿ ರವಿಕುಮಾರ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರವಿಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.