ಬೆಂಗಳೂರು: ನಗರದಲ್ಲಿ ಇಂದು ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೆಟ್ರೋ ರೈಲು ಬರುತ್ತಿದ್ದಾಗಲೇ ವ್ಯಕ್ತಿಯೊಬ್ಬ ರೈಲ್ವೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ಆತ ಗಂಭೀರವಾಗಿ ಗಾಯಗೊಂಡು, ಆ ಬಳಿಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು. ಈ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಬೆಂಗಳೂರಿನ ಅತ್ತಿಗುಪ್ಪೆ ಬಳಿಯ ನಮ್ಮ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ರೈಲು ಬರುತ್ತಿದ್ದಂತ ಸಂದರ್ಭದಲ್ಲೇ ರೈಲ್ವೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ.
ವ್ಯಕ್ತಿಯೊಬ್ಬ ದಿಢೀರ್ ರೈಲ್ವೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ, ಕೂಡಲೇ ಮೆಟ್ರೋ ರೈಲು ಸಂಚಾರವನ್ನು ಕೆಲ ಕಾಲ ಸ್ಥಗಿತಗೊಳಿಸಿರೋದಾಗಿ ತಿಳಿದು ಬಂದಿದೆ.
ಇನ್ನೂ ಮೆಟ್ರೋ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು. ಆತನನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೇ ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದಂತ ಚಂದ್ರಾಲೇಔಟ್ ಠಾಣೆಯ ಪೊಲೀಸರು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾದಂತ ಘಟನಾ ಸ್ಥಳಕ್ಕೆ ತೆರಳಿ, ಸ್ಥಳ ಮಹಜರು ನಡೆಸಿದರು. ಈ ಹಿನ್ನಲೆಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ.
This is to inform that one person has jumped in front of the train at Attiguppe station at the 2.10 pm . Presently trains are running only between Magadi road to Whitefield Feild and no services between magadi road to Challaghatta . fKI
— ನಮ್ಮ ಮೆಟ್ರೋ (@OfficialBMRCL) March 21, 2024