ಆನೇಕಲ್: ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲ್ಲ ಎಂದು ಯವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಉಳಿಮಂಗಲಂ ನಲ್ಲಿ ಘಟನೆ ನಡೆದಿದೆ.
BIGG NEWS: ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಪತ್ತೆ; ಜನತೆ ಮೂರನೇ ಡೋಸ್ ಹಾಕಿಸಿಕೊಳ್ಳಲು ಸುಧಾಕರ್ ಮನವಿ
ಮೃತನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ನರ್ಸರಿ ಫಾರ್ಮ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಕುಮಾರ್, ಇದೀಗ ಪೋಷಕರು ಬಟ್ಟೆ ಕೊಡಿಸಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಇತ್ತೀಚೆಗೆ ಯುವಕರ ಜೊತೆ ಸೇರಿ ಶಿವಕುಮಾರ್ ಮದ್ಯವ್ಯಸನಿಯಾಗಿದ್ದ. ಈ ಮಧ್ಯೆ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸುವಂತೆ ಪೋಷಕರ ಬಳಿ ಕೇಳಿದ್ದ. ಆದರೆ ಪೋಷಕರು ಬಟ್ಟೆ ಕೊಡಿಸಲು ನಿರಾಕರಿಸಿದ್ದಾರೆ. ಇದರಿಂದ ಮನನೊಂದು ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಬಾತ್ ರೂಮ್ ನಲ್ಲಿ ನೇಣು ಹಾಕಿಕೊಂಡಿದ್ದಾನೆ.