ಗದಗ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೊಳಿಸಲಾಗಿದೆ. ಸಾಲ ಮರು ಪಾವತಿಗಾಗಿ ಕಿರುಕುಳ ನೀಡುವವರ ವಿರುದ್ಧ ಈ ಕಾನೂನಿನಡಿ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಆದರೇ ಇಂತಹ ಮಸೂದೆ ಜಾರಿಗೆ ತಂದರೂ, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಲ್ಲ. ಗದಗದಲ್ಲಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ಬೆಟಗೇರಿಯ ನರಸಾಪುರದ ಆಶ್ರಯ ಕಾಲೋನಿಯ ನಿವಾಸಿ ಉಮೇಶ್ ಕಟವಾ(40) ಎಂಬುವರೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಉಮೇಶ್ ಅವರು ಬಿಎಸ್ಎಸ್ ಫೈನಾನ್ಸ್, ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಸೇರಿದಂತೆ ಇತರೆ ಫೈನಾನ್ಸ್ ಕಂಪನಿಗಳಿಂದ ಒಂದೂವರೆ ಲಕ್ಷದಷ್ಟು ಸಾಲ ಮಾಡಿದ್ದರು. ಸಾಲ ಮರುಪಾವತಿಸುವಂತೆ ನಿರಂತವಾಗಿ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿದ್ದವು.
ಇಂದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತಮ್ಮ ಮನೆಯಲ್ಲೇ ಉಮೇಶ್ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಒಂದು ಕೇಸ್ ನಲ್ಲಿ ದೋಷಾರೋಪ ನಿಗದಿ | Prajwal Revanna
Good News: ‘PPF ಖಾತೆ’ಗಳ ನಾಮಿನಿ ನವೀಕರಣಕ್ಕೆ ಯಾವುದೇ ಶುಲ್ಕವಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್