ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಮುರಳಿ ಗೋವಿಂದರಾಜು ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಶಶಿ ನಂಬಿಯಾರ್, ಉಷಾ ನಂಬಿಯಾರ್, ವರುಣ್ ನಂಬಿಯಾರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಡೆತ್ ನೋಟ್ ಬರೆದಿಟ್ಟಿದ್ದಂತ ಮುರಳಿ ಗೋವಿಂದರಾಜು ಎಂಬುವರು, ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
BREAKING: ಕಾವೇರಿ ನದಿ ತೀರ ಒತ್ತುವರಿ ತೆರವಿಗೆ ಉಪ ಲೋಕಾಯುಕ್ತ ನ್ಯಾ.ವೀರಪ್ಪ ಆದೇಶ








