ದಾವಣಗೆರೆ : ದಾವಣಗೆರೆಯಲ್ಲಿ ಕೆರೆಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭ ದಲ್ಲಿ ತೆಪ್ಪ ಮುಗುಚಿ ವ್ಯಕ್ತಿ ಒಬ್ಬ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ವೇಳೆ ತೆಪ್ಪ ಮಗುಚಿ ಬಿದ್ದ ಪರಿಣಾಮ ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ಮೂರ್ತಿ (40) ಎನ್ನುವ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
40 ವರ್ಷದ ಮೂರ್ತಿ ಮೃತ ದುರ್ದೈವಿ. ಕೆರೆಯಲ್ಲಿ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.ಕಳೆದ ಹಲವಾರು ವರ್ಷಗಳಿಂದ ಮೂರ್ತಿ ಕೆರೆಯಲ್ಲಿ ಮೀನು ಹಿಡಿಯುವುದು ತಮ್ಮ ಕುಟುಂಬ ನಿರ್ವಹಣೆ ಮಾಡಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಮೀನಿನ ಬಲೆ ಕಾಲಿಗೆ ಸಿಲುಕಿದ ಹಿನ್ನೆಲೆ ಮೂರ್ತಿ ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಮೂರ್ತಿ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.