ತುಮಕೂರು: ಜಿಲ್ಲೆಯಿಂದ ಉತ್ತರ ಪ್ರದೇಶದ ಮಹಾ ಕುಂಭಮೇಳಕ್ಕೆ ತೆರಳಿ, ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಸ್ನಾನ ಮಾಡುತ್ತಿದ್ದಂತ ಸಂದರ್ಭದಲ್ಲಿಯೇ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ಮೂಲದ ನಾಗರಾಜ್(57) ಎಂಬುವರೇ ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವಂತ ವ್ಯಕ್ತಿಯಾಗಿದ್ದಾರೆ.
ನಾಗರಾಜ್ ಸ್ನೇಹಿತರ ಜೊತೆಗೆ ಪ್ರಯಾಗ್ ರಾಜ್ ನ ಕುಂಭಮೇಳಕ್ಕೆ ತೆರಳಇದ್ದರು. ನಿನ್ನೆಯ ಮಂಗಳವಾರದ ಸಾಯಂಕಾಲ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಸಂಧ್ಯಾ ವಂದನೆಯ ಬಳಿಕ, ಪುಣ್ಯ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಆಸ್ಪತ್ರೆಗೆ ಸಾಗಿಸೋಕೂ ಮುನ್ನವೇ ಅವರು ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
BREAKING: ಫೆ.20ದಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ