ಬೆಂಗಳೂರು: ನಗರದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ, ಆ ಬಳಿಕ ವ್ಯಕ್ತಿಯ ಮೇಲೆಯೇ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಕೆ ಆರ್ ಮಾರ್ಕೆಟ್ ಫ್ಲೈಓವರ್ ಬಳಿಯಲ್ಲಿ ನಡೆದಿದೆ.
ಬೆಂಗಳೂರಿನ ಕೆ ಆರ್ ಮಾರ್ಕೆಟ್ ಬಳಿಯ ಫ್ಲೈಓವರ್ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದಂತ ಶಂಕರ್ ಎಂಬುವರಿಗೆ ಹಿಂಬದಿಯಿಂದ ವಾಹನವೊಂದು ಡಿಕ್ಕಿಯಾಗಿದೆ. ಈ ಪರಿಣಾಮ ಅವರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮತ್ತೊಂದು ವಾಹನ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೂ ಮೃತ ಶಂಕರ್ ಅವರು ಮಾರ್ಕೆಟ್ ನಿಂದ ಮೈಸೂರು ರಸ್ತೆಯ ಕಡೆಗೆ ತೆರಳುತ್ತಿದ್ದಾಗಿ ತಿಳಿದು ಬಂದಿದೆ. ಈ ವೇಳೆಯಲ್ಲೇ ಅಪರಿಚಿತ ವಾಹನ ಡಿಕ್ಕಿಯಾಗಿ ಶಂಕರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ಶಂಕರ್ ಅವರ ಪಾರ್ಥೀವ ಶರೀರವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಈ ಸಂಬಂಧ ಸ್ಥಳಕ್ಕೆ ಚಾಮರಾಜಪೇಟೆ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ದೇಶ ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದಾಗ ಸರಿದಾರಿಗೆ ತಂದಿದ್ದು ಮನಮೋಹನ್ ಸಿಂಗ್: HDD ಗುಣಗಾನ
BREAKING:’ಸುಜುಕಿ ಮೋಟಾರ್’ ಕಂಪನಿಯ ಮಾಜಿ ಅಧ್ಯಕ್ಷ ಒಸಾಮು ಸುಜುಕಿ ನಿಧನ