ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಕೊಂದು ನಿರ್ಜನ ಪ್ರದೇಶಕ್ಕೆ ತಂದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸಮೀಪದ ನೈಸ್ ರಸ್ತೆ ಪಕ್ಕದಲ್ಲೇ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಬೇರೆ ಕಡೆಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿ ಶವ ತಂದು, ನಿರ್ಜನ ಪ್ರದೇಶದಲ್ಲಿ ಸುಟ್ಟು ಹಾಕಿರುವಂತ ಶಂಕೆ ವ್ಯಕ್ತವಾಗಿದೆ. ಮೃತದೇಹದ ಮೇಲೆ ಹಗ್ಗದಿಂದ ಕಟ್ಟಿರುವಂತ ಗುರುತು ಪತ್ತೆಯಾಗಿದ್ದು, ಸ್ಥಳಕ್ಕೆ ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.
‘AI’ ಕಾಲಘಟ್ಟದಲ್ಲಿ ಸುದ್ದಿ, ಚಿತ್ರಗಳ ನೈಜತೆ ಖಾತ್ರಿ ಅಗತ್ಯ: ಸಚಿವ ಈಶ್ವರ ಖಂಡ್ರೆ
Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?








