ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಇಂದು ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ಯುವಕ ನಡುವೆ ವಾಗ್ವಾದ ನಡೆದಿದೆ. ವಾಗ್ವಾದ ತೀವ್ರಗೊಂಡು ಚಾಕುವಿನಿಂದ ಇರಿದು ಹಲ್ಲೆ ಮಾಡಿರೋದಾಗಿ ತಿಳಿದು ಬಂದಿದೆ. ಚಾಕು ಇರಿತಕ್ಕೆ ಒಳಗಾಗಿರುವಂತ ಯುವಕನ ಸ್ಥಿತಿ ಗಂಭೀರಗೊಂಡಿದೆ ಎನ್ನಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಹೋಟೆಲ್ ಒಂದಕ್ಕೆ ತೆರಳಿದ್ದಂತ ಇಬ್ಬರು ಯುವಕರ ನಡುವೆ ಮಾತಿಗೆ ಮಾತು ಬೆಳೆಗು ಜಗಳ ಉಂಟಾಗಿದೆ. ಜಗಳ ತೀವ್ರಗೊಂಡಾಗ ಶಕೀಲ್ ಎಂಬಾತನಿಗೆ ಚಾಕುವಿನಿಂದ ಹೊಟ್ಟೆಗೆ ಇರಿದು, ಮತ್ತೋರ್ವ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷ ಮನವೊಲಿಕೆಯ ರಾಜಕಾರಣ ಮಾಡುತ್ತಿದೆ – ಸಿಎಂ ಬಸವರಾಜ ಬೊಮ್ಮಾಯಿ
ಸ್ಥಳದಲ್ಲಿದ್ದಂತ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿ, ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ಚಾಕು ಇರಿತಕ್ಕೆ ಒಳಗಾದಂತ ವ್ಯಕ್ತಿಯನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
‘PSI’ ನೇಮಕಾತಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ, ಸಿಐಡಿ ಮೇಲೆ ನಂಬಿಕೆಯಿಲ್ಲ :ಸಿದ್ದರಾಮಯ್ಯ
ಅಂದಹಾಗೇ ಚಾಕು ಇರಿತಕ್ಕೆ ಒಳಗಾದಂತ ವ್ಯಕ್ತಿಯನ್ನು ಜನ್ನತ್ ಗಲ್ಲಿಯ ನಿವಾಸಿ ಶಕೀಲ್ ಎಂದು ತಿಳಿದು ಬಂದಿದೆ. ಚಾಕು ಇರಿದು ಪರಾರಿಯಾಗಿರುವಂತ ವ್ಯಕ್ತಿಯೂ ಇಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ಸಾಗರ ನಗರ ಠಾಣೆ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ ಸಿ.ಎಂ ಇಬ್ರಾಹಿಂ- ‘ಕೆಜಿಎಫ್ ಬಾಬು’ ಭೇಟಿ: ಶೀಘ್ರವೇ JDS ಸೇರ್ಪಡೆ?