ಬೆಂಗಳೂರು: ನಗರದಲ್ಲಿ ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೆಂಗಳೂರಲ್ಲಿ ಯುವತಿ ಪ್ರೀತಿಸುವ ವಿಚಾರಕ್ಕೆ ಚಾಕುವಿನಿಂದ ಇರಿದು ಕಿರಣ್(19) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಜೀವನ್ ಎಂಬಾತ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ.
ಒಂದೇ ಕಡೆ ಮೃತ ಕಿರಣ್ ಹಾಗೂ ಆರೋಪಿ ಜೀವನ್ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಕೆಲಸ ಮಾಡುತ್ತಿದ್ದಂತ ಯುವತಿಯನ್ನು ಇಬ್ಬರೂ ಪ್ರೀತಿಸುತ್ತಿದ್ದರು. ಇದೇ ವಿಚಾರಕ್ಕೆ ನಿನ್ನೆ ರಾತ್ರಿ ಕಿರಣ್ ಹಾಗೂ ಜೀವನ್ ನಡುವೆ ಗಲಾಟೆಯಾಗಿತ್ತು.
ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಗಲಾಟೆ ತೀವ್ರಗೊಂಡ ಸಂದರ್ಭದಲ್ಲಿ ಆರೋಪಿ ಜೀವನ್, ಕಿರಣ್ ಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಕೊಲೆ ಆರೋಪಿ ಜೀವನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ಸೊರಬದ ಅವಲಗೋಡು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ‘7 ತಿಂಗಳ ಚಿರತೆ ಮರಿ’ ಸಾವು
BREAKING: ಮಹಿಳೆ ಮೇಲೆ ಕೈ ಮಾಡಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡ್ರೈವರ್ ಕೆಲಸದಿಂದ ವಜಾ