ಶಿವಮೊಗ್ಗ: ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಎದುರಾಗಿದೆ. ಹಾಗಾಗಿ ವಿದೇಶದಿಂದ ಬಂದ ವ್ಯಕ್ತಿಯ ಮೇಲೆ ಹದ್ದಿನ ಕಣ್ಣು ಇಡಲಾಗಿದೆ.
ಚೀನಾದಿಂದ ಬೆಂಗಳೂರಿಗೆ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದ್ದ ಹಿನ್ನೆಲೆ ಆತಂಕ ಶುರುವಾಗಿದೆ. ಇದೀಗ ಜಿಲ್ಲೆಗಳಿಗೂ ಸಹ ಕಾಲಿಟ್ಟಿದೆ. ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದ್ದು, ಹೋಮ್ ಐಸೋಲೇಷನ್ಗೆ ಒಳಪಡಿಸಲಾಗಿದೆ. ಈಗ ಜಿಲ್ಲೆಯಲ್ಲೂ ಕೊರೊನಾ ಹೊಸ ತಳಿ BF.7 ಆತಂಕ ಹೆಚ್ಚಾಗಿದೆ.
ವಿದೇಶದಿಂದ ವ್ಯಕ್ತಿಗೆ ಬೆಂಗಳೂರು ಏರ್ ಪೋರ್ಟ್ ನಲ್ಲಿ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ ಗುಣಲಕ್ಷಣಗಳು ಕಂಡು ಬಂದಿದ್ದು, ಅವರನ್ನು ಹೋಂ ಐಸೋಲೇಷನ್ನಲ್ಲಿ ಇಡಲಾಗಿದೆ. ಈಗಾಗಲೇ ಜಿಲ್ಲಾ ಮೆಗ್ಗಾನ್ ಭೋದನಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ಗಳನ್ನು ತೆರೆದಿದ್ದಾರೆ.