ಮಂಗಳೂರು : ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತುಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ನಂತರ ಮಾತನಾಡಿದ ಸಚಿವರು ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಮಂಗಳೂರು ಸ್ಪೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪುರುಷೋತ್ತಮ್ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ , ಸದ್ಯ ಕೇವಲ ಬೆಂಕಿ ಮಾತ್ರ ಬಂದಿದೆ. ಆರೋಪಿ ಗುಣಮುಖನಾದ ಬಳಿಕ ಈ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ ಎಂದರು.
ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು ಭೇಟಿ ಮಾಡಿದ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಸಚಿವರು ಗಾಯಾಳು ಪುರುಷೋತ್ತಮ್ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ , ಪ್ರಕರಣ ಸಂಬಂಧ ಹಲವರನ್ನು ವಿಚಾರಣೆಗೊಳಪಡಿಸಿದ್ದೇವೆ, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.