Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರದಲ್ಲೇ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆ ಪರಿಹಾರ: ಸಚಿವ ಕೆ.ಜೆ ಜಾರ್ಜ್
KARNATAKA

ಶೀಘ್ರದಲ್ಲೇ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆ ಪರಿಹಾರ: ಸಚಿವ ಕೆ.ಜೆ ಜಾರ್ಜ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒಸಿ) ಕಡ್ಡಾಯಗೊಳಿಸಿರುವುದರಿಂದ ಆಗುತ್ತಿರುವ ಸಮಸ್ಯೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯಗೊಳಿಸಿರುವುದರಿಂದ ಮನೆ ನಿರ್ಮಾಣ,ಕೈಗಾರಿಕೋದ್ಯಮಕ್ಕೆ ಆಗುತ್ತಿರುವ ಸಮಸ್ಯೆ ಈಗಾಗಲೇ ಸರ್ಕಾರದ ಗಮನದಲ್ಲಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ ಪರಿಹಾರ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.

ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ ಕಡ್ಡಾಯಗೊಳಿಸಿದೆ. ಇದರಿಂದ ಉದ್ಭವವಾಗಿರುವ ಸಮಸ್ಯೆ ನಿವಾರಿಸಲು ಬೈಲಾ ತಿದ್ದುಪಡಿ ಮಾಡಬೇಕಿದೆ. ಅದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ, ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಅವರು ವರದಿ ಸಲ್ಲಿಸಿದ ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಸಮಸ್ಯೆ ನಿವಾರಿಸಲಾಗುವುದು ಎಂದರು.

ಗೃಹ ಜ್ಯೋತಿ ಡಿ ಲಿಂಕ್ ಸಮಸ್ಯೆ ಇಲ್ಲ:

ಗೃಹ ಜ್ಯೋತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆಯಾದರೂ ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್ ಆರ್ ನಂಬರ್ ಗೆ ಡಿ ಲಿಂಕ್ ಮಾಡಿ ಹೊಸ ಆರ್ ಆರ್ ನಂಬರ್ ಗೆ ಲಿಂಕ್ ಮಾಡುವ ವೇಳೆ ಸಮಸ್ಯೆಯಾಗುತ್ತಿದೆ ಎಂಬ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಜೆ.ಜಾರ್ಜ್, ಆನ್ ಲೈನ್ ಮೂಲಕವೇ ಡಿ ಲಿಂಕ್ ಮತ್ತು ಲಿಂಕ್ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಕಾಣಿಸಿಕೊಂಡರೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಪ್ರಸ್ತುತ 1.60 ಕೋಟಿ ಕುಟುಂಬಗಳು ಶೂನ್ಯ ಬಿಲ್ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಇದರ ಸಬ್ಸಿಡಿ ಮೊತ್ತ ಸುಮಾರು 9,000 ಕೋಟಿ ರೂ.ಅನ್ನು ಈಗಾಗಲೇ ಸರ್ಕಾರ ಸಂಬಂಧಿಸಿದ ಎಸ್ಕಾಂಗಳಿಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಆದ್ಯತೆ ನೀಡುವುದರ ಜತೆಗೆ ಬೇಸಿಗೆಯಲ್ಲಿ ಅನ್ಯ ರಾಜ್ಯಗಳಿಂದ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆದು ಗ್ರಾಹಕರಿಗೆ ಪೂರೈಸಿದ್ದು, ವಿದ್ಯುತ್ ಸಮಸ್ಯೆಯಾಗದಂತೆ ಗಮನಹರಿಸಲಾಗಿದೆ. ಪ್ರಸ್ತುತ ರಾಜ್ಯದ ಒಟ್ಟು ಉತ್ಪಾದನೆ ಪೈಕಿ ಶೇ. 65 ವಿದ್ಯುತ್ ನವೀಕರಿಸಬಹುದಾದ ಇಂಧನ ಮೂಲಗಳಿಂದ ಬರುತ್ತಿದೆ. ಇದರಿಂದಾಗಿ ಪ್ರಸ್ತುತ ಹೆಚ್ಚುವರಿ ವಿದ್ಯುತ್ ರಾಜ್ಯದಲ್ಲಿ ಲಭ್ಯವಿದೆ. ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ನಿವಾರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕರ್ಣೇ ಕೋ ಹಮ್ ಕುಚ್ ಔರ್ ಭಿ ಕರ್ ಸಕ್ತೇ ದಿ: ಆಪರೇಷನ್ ಸಿಂಧೂರ್ ನಂತರ ಪಾಕ್ ಗೆ ರಾಜನಾಥ್ ಸಿಂಗ್ ಎಚ್ಚರಿಕೆ

BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ:  ಹೈಕೋರ್ಟ್ ನಿಂದ ಆದೇಶವೇ ರದ್ದು.!

Share. Facebook Twitter LinkedIn WhatsApp Email

Related Posts

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

1 Min Read
Recent News

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

ಸಚಿನ್ ತೆಂಡೂಲ್ಕರ್ ರ 36 ವರ್ಷಗಳ ಹಳೆಯ ದಾಖಲೆ ಮುರಿದ 15ರ ಹರೆಯದ ವೈಭವ್ ಸೂರ್ಯವಂಶಿ!

State News
KARNATAKA

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಮನಗರ: ಜಿಲ್ಲೆಯ ಬಿಡದಿ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೃಷ್ಣರಾಜಪೇಟೆ (ಕೆ.ಆರ್. ಪೇಟೆ) ವಿಧಾನಸಭಾ ಕ್ಷೇತ್ರದ ಮಾಜಿ…

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.