ಬೆಂಗಳೂರು : ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾಂಡೌಸ್ ಚಂಡಮಾರುತ ಹಿನ್ನೆಲೆ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೋಲಾರ, ರಾಮನಗರ, ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ರಾತ್ರಿಯಿಂದ ನಾಳೆವರೆಗೆ ನಿರಂತರ ಗಾಳಿ ಬೀಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾಂಡೌಸ್ ಚಂಡಮಾರುತ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಲಿದ್ದು, ಡಿಸೆಂಬರ್ 10ರ ಮುಂಜಾನೆ ಗಂಟೆಗೆ 65.75 ಕಿಮೀ ವೇಗದಲ್ಲಿ ಚಂಡಮಾರುತದ ಪ್ರಭಾವ ಬಲವಾದ ಗಾಳಿ ಬೀಸಲಿದೆ ಎಂದು ಇಲಾಖೆ ಎಚ್ಚರಿಸಿದೆ.
BREAKING: ಶ್ರದ್ಧಾ ಕೊಲೆ ಪ್ರಕರಣ: ಅಫ್ತಾಬ್ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸಿದ ದೆಹಲಿ ನ್ಯಾಯಾಲಯ
BREAKING NEWS : ಗೃಹ ಸಚಿವರ ಎದುರೇ ಕಿತ್ತಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು