ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಸೇತುವೆ ಕಾಮಗಾರಿ ನಡೆಯುತ್ತಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಟ್ಟದಾಸನದೊಡ್ಡಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ.
ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ್ದಾನೆ. ಕೆಸ್ತೂರು ಗ್ರಾಮದ ನಿವಾಸಿ ರಾಮು (50) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾಮಗಾರಿ ಮಾಹಿತಿ ಫಲಕ ಅಳವಡಿಸದೆ ಕಾಮಗಾರಿ ನಡೆಸಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಇನ್ನು ಘಟನೆ ಕುರಿತಂತೆ ಕೆಸ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.