ಮಂಡ್ಯ: ಜಿಲ್ಲೆಯ ಅಂಬರಹಳ್ಳಿ ಪ್ರಾಥಮಿಕ ಶಾಲೆಯೊಂದರಲ್ಲಿ ಹಲ್ಲಿಬಿದ್ದಂತ ಬಿಸಿಯೂಟ ಸೇವಿಸಿದಂತ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯಲ್ಲಿರುವಂತ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಹಲ್ಲಿಬಿದ್ದಂತ ಬಿಸಿಯೂಟ ಸೇವಿಸಿದಂತ 19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ.
BREAKING : ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಮುಂದಿನ ವಾರ ಬಿಜೆಪಿ ಸೇರ್ಪಡೆ
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಒಟ್ಟು 29 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅವರಿಗೆ ಇದೀಗ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಕೆಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG NEWS: ಜಿಲೆಟಿನ್ ಇಟ್ಟು ಗ್ರಾಮ ಪಂಚಾಯತ್ ಕಟ್ಟಡ ಧ್ವಂಸ: ಬೆಚ್ಚಿ ಬಿದ್ದ ಕಲ್ಪತರು ನಗರಿಯ ಜನತೆ