ಮಂಡ್ಯ : ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳು ವೃತ್ತಿಪರ ಶಿಕ್ಷಣಕ್ಕೆ ತಗಲುವ ವೆಚ್ಚವನ್ನು ಭರಿಸುವಲ್ಲಿ ಬಹಳಷ್ಟು ಆರ್ಥಿಕವಾಗಿ ಸಮಸ್ಯೆಯನ್ನು ಎದುರಿಸುತ್ತಿದ್ದು, ಹೀಗಾಗಿ ಸಂಘದ ಸದಸ್ಯರ ಮಕ್ಕಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ನೀಡಲಾಗುತ್ತಿದೆ ಎಂದು ಜಿಲ್ಲಾ ನಿರ್ದೆಶಕಿ ಎಂ.ಚೇತನಾ ತಿಳಿಸಿದರು.
ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಆವರಣದಲ್ಲಿರುವ ವ್ಯಾಖ್ಯಾನ ಮಂಟಪದಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಸಂಘದ ಸದಸ್ಯರ ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಮಾಡಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಲವಾರು ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ಕಾರ್ಯಕ್ರಮವು ಸಹ ಬಹಳ ಉತ್ತಮವಾದ ಕಾರ್ಯಕ್ರಮವಾಗಿದೆ ಎಂದರು.
ರಾಜ್ಯದಲ್ಲಿ ಇಲ್ಲಿವರೆಗೂ 1,25,000 ವಿದ್ಯಾರ್ಥಿಗಳಿಗೆ 152.75 ಕೋಟಿ ಶಿಷ್ಯವೇತನ ವಿತರಣೆ ಮಾಡಲಾಗಿದೆ. ಮದ್ದೂರು ತಾಲೂಕಿನಲ್ಲಿ ಇಲ್ಲಿಯವರೆಗೂ 981 ವಿದ್ಯಾರ್ಥಿಗಳಿಗೆ 1 ಕೋಟಿ 25 ಸಾವಿರ ಮೊತ್ತ ವಿತರಣೆಯಾಗಿದ್ದು, ಪ್ರಸ್ತುತ ವರ್ಷ 182 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿಯಾಗಿರುತ್ತದೆ ಎಂದರು.
ಸುಜ್ಞಾನ ನಿಧಿ ಶಿಷ್ಯವೇತನ ಪಡೆದ ಎಲ್ಲಾ ಮಕ್ಕಳು ಸುಸಂಸ್ಕೃತ ಸಮಾಜಕ್ಕೆ ಮಾದರಿಯಾಗಿ ಪರಮ ಪೂಜ್ಯರು ನೀಡಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಮಾಜದ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.
ಇದೇ ವೇಳೆ ಕಾರ್ಯಕ್ರಮದಲ್ಲಿ 182 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸುಜ್ಞಾನ ಜಾಗೃತಿ ವೇದಿಕೆ ಸದಸ್ಯ ಲಿಂಗೇಗೌಡ, ಜನಜಾಗೃತಿ ವೇದಿಕೆ ಸದಸ್ಯರಾದ ಗುರುಸ್ವಾಮಿ, ಕ್ಷೇತ್ರ ಯೋಜನಾಧಿಕಾರಿ ಎಂ.ಎ.ಹಾಲಪ್ಪ, ವಲಯದ ಮೇಲ್ವಿಚಾರಕರಾದ ಮಂಜುನಾಥ್, ಸಿ.ಎನ್.ನಾಗೇಶ್ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ರಾಜ್ಯದಲ್ಲೊಂದು ಅಮಾನುಷ ಘಟನೆ: ಮಂಡ್ಯದಲ್ಲಿ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು
SHOCKING : ವಿವಾಹಿತನಿಂದ ನಿರಂತರ ಅತ್ಯಾಚಾರ : ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ.!