ಮಂಡ್ಯ: ಹನುಮ ಜಯಂತಿಯ ಹಿನ್ನಲೆಯಲ್ಲಿ, ದಿನಾಂಕ 04-12-2022ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದು, ದಿನಾಂಕ 04-12-2022ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 05-12-2022ರ ಬೆಳಿಗ್ಗೆ 6 ಗಂಟೆಯವರೆಗೆ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಬಾರ್ ಮತ್ತು ರೆಸ್ಟೋರೆಂಟ್, ಮದ್ಯ ಸಂಗ್ರಹಣೆ, ಸಾಗಾಣಿಕೆ ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಿ ಆದೇಶಿಸಿದ್ದಾರೆ.
ಅಂದಹಾಗೇ ದಿನಾಂಕ 04-12-2022ರಂದು ಹನುಮ ಜಯಂತಿ ಅಂಗವಾಗಿ ಶೋಭ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿಯೇ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ವರದಿ: ಗಿರೀಶ್ ರಾಜ್, ಮಂಡ್ಯ