ಮಂಡ್ಯ: ಜಿಲ್ಲೆಯಲ್ಲಿ ಹನುಮಧ್ವಜ ವಿವಾದ ತಾರಕ್ಕೇರಿದೆ. ಬಿಜೆಪಿ ನಡೆಸುತ್ತಿರುವಂತ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ನಗರದಲ್ಲಿ ಸಿಕ್ಕ ಸಿಕ್ಕ ಕಾಂಗ್ರೆಸ್ ಬ್ಯಾನರ್ ಗಳನ್ನು ಹರಿದು ಹಾಕಲಾಗುತ್ತಿದೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ, ಗಣಿಗ ರವಿ ಬ್ಯಾನರ್ ಮೇಲೆ ಕಲ್ಲು ತೂರಾಟ ನಡೆಸಿ, ಹರಿದು ಹಾಕಿ ಆಕ್ರೋಶವನ್ನು ಹೊರ ಹಾಕಲಾಗಿದೆ.
ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದೆ. ಡಿಸಿ ಕಚೇರಿಗೆ ಸಾಗೋ ದಾರಿಯುದ್ಧಕ್ಕೂ ಕಾಂಗ್ರೆಸ್ ಪಕ್ಷದ ಬ್ಯಾನರ್ ಗಳನ್ನು ಹರಿದು ಹಾಕಲಾಗುತ್ತಿದೆ. ಕಾಂಗ್ರೆಸ್ ಶಾಸಕ ಗಣಿಕ ರವಿ ಬ್ಯಾನರ್ ಹರಿದು ಹಾಕೋ ವೇಳೆಯಲ್ಲಿ ಮಾತಿನ ಚಕಮಕಿ ನಡೆದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸೋದಕ್ಕೆ ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ.
ಮಂಡ್ಯ ತಾಲೂಕಿ ಕೆರಗೋಡಿನಲ್ಲಿ ಹನುಮಧ್ವಜ ವಿವಾದದ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನೆಗೆ ಬಿಜೆಪಿ ನಾಯಕರು ಕಣಕ್ಕಿಳಿದ ಕಾರಣ, ಮತ್ತಷ್ಟು ತಾರಕ್ಕೇರಿದೆ. ಮಂಡ್ಯ ಡಿಸಿ ಕಚೇರಿಗೆ ಮುತ್ತಿಗೆ ಹಾಕೋ ಮುನ್ನವೇ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದರ ನಡುವೆ ಪೊಲೀಸರು ನಡೆಸಿದಂತ ಲಾಠಿ ಚಾರ್ಜ್ ನಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಬ್ಯಾನರ್ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ.
BREAKING: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ: ವಿಚಾರಣೆಗೆ ಪಾಟ್ನಾದ ED ಕಚೇರಿಗೆ ಹಾಜರಾದ ಲಾಲು ಯಾದವ್
BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ‘ಎ.ಪಿ.ರಂಗನಾಥ್’ ನಾಮಪತ್ರ ಸಲ್ಲಿಕೆ