ಮಂಡ್ಯ : ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಬಹುತೇಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದ್ದು, ಮನ್ ಮುಲ್ ಆಡಳಿತ ಮಂಡಳಿಯನ್ನುಕೈ ತೆಕ್ಕೆಗೆ ತೆಗೆದುಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕರು ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ ಬೆಂಬಲಿತ ನೂತನ ನಿರ್ದೇಶಕರನ್ನು ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಗಣಿಗ ರವಿಕುಮಾರ್ ಅಭಿನಂದಿಸಿ ಸಿಹಿ ತಿನ್ನುಸುವ ಮೂಲಕ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಂಭ್ರಮಾಚರಣೆ ಆಚರಿಸಿದರು.
ಮಂಡ್ಯದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಮಾಜಿ ಅಧ್ಯಕ್ಷ ಬಿ.ಎಸ್.ರಾಮಚಂದ್ರ, ಮಾಜಿ ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹಾಲಿ ನಿರ್ದೇಶಕ ಶಿವಕುಮಾರ್ (ಶಿವಪ್ಪ) ಭರ್ಜರಿ ಜಯಭೇರಿ ಬಾರಿಸಿದರು.
ನಾಗಮಂಗಲದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಎನ್.ಅಪ್ಪಾಜಿಗೌಡ ಹಾಗೂ ಲಕ್ಷ್ಮಿ ನಾರಾಯಣ್ ಗೆಲುವು ಸಾಧಿಸಿದರು.
ಪಾಂಡವಪುರದಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಶಿವಕುಮಾರ್ ಗೆಲುವಿನ ನಗೆ ಬೀರಿದರು.
ಶ್ರೀರಂಗಪಟ್ಟಣದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬೋರೆಗೌಡ ಸತತ ಐದನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ.
ಮದ್ದೂರಿನಿಂದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಹರೀಶ್ ಬಾಬು ಹಾಗೂ ಬಿಜೆಪಿ ಪಕ್ಷದ ಬಂಡಾಯದ ಅಭ್ಯರ್ಥಿ ಎಸ್.ಪಿ.ಸ್ವಾಮಿ ಗೆಲುವಿನ ದಡ ಸೇರಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾದ ಡಾಲು ರವಿ ಹಾಗೂ ಎಂ.ಬಿ.ಹರೀಶ್ ಜಯಭೇರಿ ಬಾರಿಸಿದ್ದು, ಹಾಲಿ ನಿರ್ದೇಶಕ ಮತ್ತು ಶಾಸಕ ಹೆಚ್.ಟಿ.ಮಂಜು ಸೋಲುಂಡಿದ್ದಾರೆ.
ಮಳವಳ್ಳಿ ತಾಲೂಕಿನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೃಷ್ಣೇಗೌಡ ಅವರು ವಿಶ್ವನಾಥ್ ಅವರನ್ನು ಮಣಿಸಿ ಗೆಲುವಿನ ಕಿರೀಟವನ್ನು ಮುಡಿ ಗೆರಿಸಿಕೊಂಡಿದ್ದಾರೆ.
ಇನ್ನು ಮೈಷುಗರ್ ಶಾಲೆಯಲ್ಲಿ ನಡೆದ ಚುನಾವಣೆ ಬಳಿಕ ಮತ ಎಣಿಕೆ ಕಾರ್ಯ ನಡೆಸಲಾಯಿತು. ಆದರೆ ಕೆಲವು ಅಭ್ಯರ್ಥಿಗಳು ಫಲಿತಾಂಶದ ಬಗ್ಗೆ ನ್ಯಾಯಾಲಯದ ಮೊರೆಹೋದ ಪರಿಣಾಮ ಮದ್ದೂರು, ಮಳವಳ್ಳಿ ಹಾಗೂ ಕೆ.ಆರ್.ಪೇಟೆ ತಾಲೂಕುಗಳ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಲಿಲ್ಲ. ಫಲಿತಾಂಶದ ಮಾಹಿತಿಯನ್ನು ಜಿಲ್ಲಾಡಳಿತ ನ್ಯಾಯಾಲಯಕ್ಕೆ ಸಲ್ಲಿಬೇಕಾಗಿರುವುದರಿಂದ ಫಲಿತಾಂಶವನ್ನು
ಚುನಾವಣಾಧಿಕಾರಿಗಳು ತಡೆ ಹಿಡಿದಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ
ಲಂಚಪಡೆಯುತ್ತಿದ್ದಾಲೇ ಸಿಬಿಐ ಬಲೆಗೆ ಬಿದ್ದ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್, ಅರೆಸ್ಟ್
SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!