Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲೇ ‘ಜಾತಿಗಣತಿ ಸಮೀಕ್ಷೆ’ಯಲ್ಲಿ ‘ಮಂಡ್ಯ ಜಿಲ್ಲೆ’ಗೆ ಪ್ರಥಮ ಸ್ಥಾನ: ಡಿಸಿ ಅಭಿನಂದನೆ
KARNATAKA

ರಾಜ್ಯದಲ್ಲೇ ‘ಜಾತಿಗಣತಿ ಸಮೀಕ್ಷೆ’ಯಲ್ಲಿ ‘ಮಂಡ್ಯ ಜಿಲ್ಲೆ’ಗೆ ಪ್ರಥಮ ಸ್ಥಾನ: ಡಿಸಿ ಅಭಿನಂದನೆ

By ವಸಂತ ಬಿ ಈಶ್ವರಗೆರೆ

ಮಂಡ್ಯ: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ದೊರೆತಿದೆ. ಹೀಗಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಇದಕ್ಕೆ ಕಾರಣವಾದಂತ ಜಿಲ್ಲೆಯ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಜ್ಯದ ಎಲ್ಲಾ ವರ್ಗಗಳ/ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ದಿನಾಂಕ: 22.09.2025 ರಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 5,10,000 ಕುಟುಂಬಗಳನ್ನು ಸಮೀಕ್ಷೆ ಮಾಡಲಾಗಿದ್ದು, ಒಟ್ಟು 18, 29 ,582 ಜನಸಂಖ್ಯೆಯ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಹಾಗೂ ಮಂಡ್ಯ ಜಿಲ್ಲೆಯು ರಾಜ್ಯದಲ್ಲೇ 1ನೇ ಸ್ಥಾನವನ್ನು ಪ್ರತಿನಿಧಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಈ ಸಮೀಕ್ಷಾ ಕಾರ್ಯದ ಯಶಸ್ಸಿಗೆ ಸಾಕಷ್ಟು ಜನರು ಹಗಲೂ ಇರುಳು ಎಂಬುದನ್ನೂ ಲೆಕ್ಕಿಸದೆ ದುಡಿದಿದ್ದಾರೆ. ನಮ್ಮ ಜಿಲ್ಲಾಹಂತದ ಮತ್ತು ತಾಲ್ಲೂಕು ಹಂತದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಸಮಸ್ತ ಶಿಕ್ಷಕ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಮತ್ತು ಪಾಲ್ಗೊಳ್ಳುವಿಕೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಮೀಕ್ಷಾ ಕಾರ್ಯ ನಮ್ಮೆಲ್ಲರ ಜವಾಬ್ದಾರಿ ಎಂಬ ಮನೋಭಾವದೊಂದಿಗೆ ಪರಿಭಾವಿಸಿ ಪ್ರತಿ ಹಂತದಲ್ಲೂ ನಮ್ಮೊಟ್ಟಿಗೆ ಸಹಕರಿಸುವ ಮೂಲಕ ನಿಮ್ಮ ಬದ್ಧತೆ ಮತ್ತು ಕರ್ತವ್ಯ ತತ್ಪರತೆಯನ್ನು ಪ್ರದರ್ಶಿಸಿರುತ್ತೀರಿ. ನಿಮ್ಮ ತಂಡ ಸ್ಪೂರ್ತಿ, ಇಚ್ಛಾ ಶಕ್ತಿಯ ಜೊತೆಗೆ ಮಂಡ್ಯ ಜಿಲ್ಲೆಯ ಸಾರ್ವಜನಿಕರು ಧನಾತ್ಮಕವಾಗಿ ಸ್ಪಂದನೆ ನೀಡಿ ಸಹಕರಿಸಿದ್ದು ಸಹ ಈ ಯಶಸ್ಸಿಗೆ ಕಾರಣವಾಗಿದೆ. ಅದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳು ಅಂತ ತಿಳಿಸಿದ್ದಾರೆ.

ಈ ಬೃಹತ್ ಕಾರ್ಯದಲ್ಲಿ ಭಾಗಿಯಾದ ಜಿಲ್ಲಾ ಹಂತದ ಅಧಿಕಾರಿಗಳು, ತಾಲ್ಲೂಕು ನೋಡಲ್ ಅಧಿಕಾರಿಗಳು, ತಹಶೀಲ್ದಾರ್ ಗಳು , ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಮೀಕ್ಷಾ ಮೇಲ್ವಿಚಾರಕರು, ಸಮೀಕ್ಷಾದಾರರು, ವಿಶೇಷವಾಗಿ ಅಪಾರ ಶಿಕ್ಷಕಸಮುದಾಯ ಹಾಗೂ ಕುಟುಂಬಗಳನ್ನು ಗುರುತಿಸುವ ಕಾರ್ಯದಲ್ಲಿ ಸಹಕರಿಸಿದ ಚೆಸ್ಕಾಂ ನೌಕರರು, ಗ್ರಾಮಪಂಚಾಯತಿ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತರು ಎಲ್ಲರಿಗೂ ಅಭಿನಂದನೆಗಳು ಅಂತ ತಿಳಿಸಿದ್ದಾರೆ.

ವರದಿ: ಗಿರೀಶ್ ರಾಜ್, ಮಂಡ್ಯ

CRIME NEWS: ಬೆಂಗಳೂರಲ್ಲಿ ಪುಡ್ ಡೆಲಿವರಿ ಬಾಯ್ ರಾಬರಿ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಬೆಂಗಳೂರು ಜನತೆ ಗಮನಕ್ಕೆ: ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ

Share. Facebook Twitter LinkedIn WhatsApp Email

Related Posts

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

1 Min Read

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

2 Mins Read

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

1 Min Read
Recent News

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

​ಹಣ ಉಳಿತಾಯಕ್ಕೆ ಇಲ್ಲಿದೆ ಸರಳ ದಾರಿ: ನಿಮ್ಮ ಜೀವನಶೈಲಿಯಲ್ಲಿ ಸಣ್ಣ ಬದಲಾವಣೆ ಮಾಡಿ ಆರ್ಥಿಕ ಭದ್ರತೆ ಪಡೆಯಿರಿ!

State News
KARNATAKA

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

By ಸುರೇಶ್‌ KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ मुख्यमंत्री ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ…

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.