ಮಂಡ್ಯ: ಜಿಲ್ಲೆಯ ಕೆರಗೋಡಿನಲ್ಲಿ ನಡೆದಂತ ಹನುಮಧ್ವಜ ದಂಗಲ್ ಕುರಿತಂತೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕೆರಗೋಡಿನಿಂದ ಪಾದಯಾತ್ರೆ ಮೂಲಕ ಆಗಮಿಸಿದಂತ ಬಿಜೆಪಿ ನಾಯಕರು, ಡಿಸಿ ಕಚೇರಿಗೆ ಮುತ್ತಿಗೆ ಹಾಕೋದಕ್ಕೆ ಜಮಾಯಿಸಿದ್ದಾರೆ. ಇಂತಹ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿರುವಂತ ಧರ್ಮ ದಂಗಲ್ ಬಿಜೆಪಿ ಪ್ರತಿಭಟನೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆಗೆ ಮೈತ್ರಿ ಮಾಡಿಕೊಂಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಧುಮುಕಿದ್ದಾರೆ. ಕೇಸರಿ ಶಾಲು ಧರಿಸಿ, ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ನಡೆಸುತ್ತಿರುವಂತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಈ ಪ್ರತಿಭಟನೆಯಲ್ಲಿ ಬಿಜೆಪಿಯ ಸುರೇಶ್ ಗೌಡ, ಅನ್ನದಾನಿ, ಸಿಟಿ ರವಿ, ನಾರಾಯಣಗೌಡ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ.
BREAKING: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ: ವಿಚಾರಣೆಗೆ ಪಾಟ್ನಾದ ED ಕಚೇರಿಗೆ ಹಾಜರಾದ ಲಾಲು ಯಾದವ್
BREAKING: ಮಂಡ್ಯದಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ: ಸಿಎಂ ಸಿದ್ಧರಾಮಯ್ಯ, ಶಾಸಕ ಗಣಿಗ ರವಿ ಬ್ಯಾನರ್ ಹರಿದು ಆಕ್ರೋಶ