ಬೆಂಗಳೂರು: ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮ ಪಂಚಾಯತಿಯಲ್ಲಿ ವಿವಾದ ಸೃಷ್ಠಿಸಿ ಕೋಮು ಸೌಹಾರ್ದ ಕೆಡಿಸಲು ಬಿಜೆಪಿಯ ಹುನ್ನಾರದ ಕುರಿತಂತೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು, ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ ಎಂದಿದ್ದಾರೆ.
ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ಆರ್ ಅಶೋಕ್ ಹಾಗೂ ಬಿವೈ ವಿಜಯೇಂದ್ರ ಅವರೇ,
ನಿಮ್ಮ ಗಮನಕ್ಕೆ ಕೆಲವು ವಿಚಾರಗಳು ಎಂದು ಈ ಕೆಳಗಿನಂತೆ ಮಾಹಿತಿ ಹಂಚಿಕೊಂಡಿದ್ದಾರೆ.
◆29/12/2023 ರಂದು
ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ.
◆17/01/2024ರಂದು
ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ.
◆18/01/2024ರಂದು
ಕೆರೆಗೋಡು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಶರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ.
◆ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡುವ ಮಾರ್ಪಾಡುಗಳಿಗೆ ಬದ್ಧರಾಗಿರಬೇಕೆಂದು ತಿಳಿಸಲಾಗಿದೆ.
◆ಯಾವುದೇ ಗಲಭೆಗಳಿಗೆ ಅವಕಾಶ ಮಾಡಿಕೊಡದಂತೆ ಷರತ್ತು ವಿಧಿಸಲಾಗಿದೆ.
◆ಧ್ವಜಾರೋಹಣ ಮಾಡುವ 6-7 ದಿನ ಮುಂಚಿತವಾಗಿ ಗ್ರಾಮ ಪಂಚಾಯ್ತಿ ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿದೆ.
ಬಿಜೆಪಿ ಇಂದು ಉತ್ತರಿಸಲೇಬೇಕಾದ ಪ್ರಶ್ನೆಗಳು..
ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು?
ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು?
ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು?
ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ?
ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ RSS ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ, ರಾಷ್ಟ್ರ ಧ್ವಜಕ್ಕೆ ಕೈ ಮುಗಿಯುವ ಬದಲು ಕೆಂಡ ಕಾರುತ್ತಿದೆ.
ಬಿವೈ ವಿಜಯೇಂದ್ರ ಹಾಗೂ ಆರ್ ಅಶೋಕ್ ರವರೇ, ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ, ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ? ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ಬಿಜೆಪಿಗರಿಗೆ ದೇಶದ ಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ. ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ ಎಂಬುದಾಗಿ ತಿಳಿಸಿದ್ದಾರೆ.
ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ.
ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ.ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ… pic.twitter.com/9RNKWOVKOr
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 28, 2024
BREAKING: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ: ವಿಚಾರಣೆಗೆ ಪಾಟ್ನಾದ ED ಕಚೇರಿಗೆ ಹಾಜರಾದ ಲಾಲು ಯಾದವ್
BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ‘ಎ.ಪಿ.ರಂಗನಾಥ್’ ನಾಮಪತ್ರ ಸಲ್ಲಿಕೆ