ಮಂಡ್ಯ : ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ವಿರುದ್ದ ಮುಂದಿನ ಹತ್ತು ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ( Minister K Gopalaiha ) ಹೇಳಿದ್ದಾರೆ.
ಮಳವಳ್ಳಿಯ ಮೈಸೂರು ರಸ್ತೆಯಲ್ಲಿರುವ ಮೃತ ಬಾಲಕಿಯ ಮನೆಗೆ ಇಂದು ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅತ್ಯಾಚಾರಿ ಆರೋಪಿಗೆ ಕಠಿಣ ಶಿಕ್ಷೆ ಆಗುತ್ತದೆ. ಈ ಪ್ರಕರಣವನ್ನ ಶೀಘ್ರಗತಿ ನ್ಯಾಯಾಲಯಕ್ಕೆ ವಹಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಈ ಪ್ರಕರಣ ಸಂಬಂಧ ಈಗಾಗಲೇ ಸಿಎಂ ಜೊತೆ ಮಾತುಕತೆ ನಡೆಸಲಾಗಿದ್ದು, ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲಾಗುವುದು. ಮುಂದಿನ ದಿನಗಳಲ್ಲಿ ಬಾಲಕಿ ಕುಟುಂಬಕ್ಕೆ ಪರಿಹಾರ ಕೊಡಿಸುತ್ತೇವೆ.ಆದರೆ ಎಷ್ಟೇ ಪರಿಹಾರ ಕೊಟ್ಟರೂ ಬಾಲಕಿ ವಾಪಸ್ಸು ತರಲು ಆಗುವುದಿಲ್ಲ. ನಮಗೂ ಅತೀವ ಆ ದುಖಃ ಇದೆ ಎಂದು ಹೇಳಿದರು.
ಹಾಸನದಲ್ಲಿ ಧಾರ್ಮಿಕ ಕಾರ್ಯಕ್ರಮ ಇದ್ದಕಾರಣದಿಂದ ಇಲ್ಲಿಗೆ ಬರುವುದು ತಡವಾಯಿತು. ಪ್ರಕರಣದ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.
BIGG NEWS: ಲವ್ ಜಿಹಾದ್ ಆರೋಪ; ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಅರೆಸ್ಟ್
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು