ಮಂಡ್ಯ: ಜಿಲ್ಲೆಯಲ್ಲಿ ಇಂದು ವರುಣ ಆರ್ಭಟಿಸಿದ್ದಾರೆ. ಬಿರು ಬಿಸಿಲಿನಿಂದ ಕಂಗೆಟ್ಟಿದ್ದಂತ ಜನತೆಗೆ ತಂಪೆರೆದು, ಖುಷಿಯ ನೀಡಿದ್ದಾನೆ.

ಸಕ್ಕರೆ ನಾಡು ಮಂಡ್ಯದಲ್ಲಿ ವರುಣ ಆರ್ಭಟಿಸಿದ್ದಾನೆ. ಮಂಡ್ಯ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮಂಡ್ಯ, ಕೆಆರ್ ಪೇಟೆ, ನಾಗಮಂಗಲ ಸೇರಿದಂತೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ.

ಬಿರು ಬಿಸಿಲ ನಂತ್ರ ಸುರಿದಂತ ಮಳೆರಾಯನ ಆರ್ಭಟಕ್ಕೆ ಧರಣಿ ತಣಿದಿದ್ದಲ್ಲದೇ, ಬಿರು ಬಿಸಿಲಿನಿಂದ ಕಂಗೆಟ್ಟಿದ್ದಂತ ಜನಕ್ಕೆ ತಂಪೆರೆದಂತೆ ಆಗಿದೆ.

ಅಂದಹಾಗೇ ಮೊದಲ ಮಳೆಯ ಸಿಂಚನದಿಂದ ಮಂಡ್ಯ ಜಿಲ್ಲೆಯ ಜನರಲ್ಲಿ ಮಂದಹಾಸ ಮೂಡಿದೆ. ಇನ್ನೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದಿನಿಂದ ಐದು ದಿನ ರಾಜ್ಯದ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ವರದಿ: ಗಿರೀಶ್ ರಾಜ್, ಮಂಡ್ಯ

`ಕಾಂಗ್ರೆಸ್ ಗೆ ಮತ ಹಾಕಿ’ : ಮಂಡ್ಯದಲ್ಲಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಅಬ್ಬರದ ಪ್ರಚಾರ!

`ಕಾಂಗ್ರೆಸ್ ಗೆ ಮತ ಹಾಕಿ’ : ಮಂಡ್ಯದಲ್ಲಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಅಬ್ಬರದ ಪ್ರಚಾರ!

Share.
Exit mobile version