ಮಂಡ್ಯ : ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಎಕ್ಸ್ಪ್ರೆಸ್ ಹೈವೇ ಬಿಟ್ಟು ಹಳ್ಳಕ್ಕೆ ನುಗ್ಗಿದ ಪರಿಣಾಮ ಚಾಲಕನ ಕಾಲು ಮುರಿದಿದ್ದು ಬಸ್ ನಲ್ಲಿದ್ದ 8 ಪ್ರಯಾಣಿಕರಿಗೆ ಕಂಭೀರವಾದಂತಹ ಗಾಯಗಳಾಗಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದೆನಹಳ್ಳಿ ಎಂಬಲ್ಲಿ ನಡೆದಿದೆ.
ಹೌದು ಎಕ್ಸ್ಪ್ರೆಸ್ ಹೈವೇ ದಾಟಿ ಹಳ್ಳಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್ ಮಂಡ್ಯ ತಾಲೂಕಿನ ರಾಗಿಮುದ್ದೆನಹಳ್ಳಿ ಗೇಟ್ ಬಳಿ ಭೀಕರ ಅಪಘಾತ ನಡೆದಿದೆ. ಬಸ್ ಮೊದಲು ಸರ್ವಿಸ್ ಡಿವೈಡರ್ ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಸರ್ವಿಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಕೆಲ ಬೈಕುಗಳಿಗೂ ಬಸ್ ಡಿಕ್ಕಿ ಹೊಡೆದಿದೆ.
ಈ ವೇಳೆ ಕೆಎಸ್ಆರ್ಟಿಸಿ ಬಸ್ಸ ಚಾಲಕನ ಕಾಲು ಮುರಿದಿದ್ದು, ಎಂಟು ಪ್ರಯಾಣಿಕರಿಗೆ ಗಾಯಗಳಾಗಿವೆ, ಗಾಯಾಳುಗಳಿಗೆ ಮಂಡ್ಯ ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.