ಮಂಡ್ಯ : ಮಳವಳ್ಳಿಯಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಎಂಬುದು ಬಯಲಿಗೆ ಬಂದಿದೆ.
ಆರೋಪಿ ಕಾಂತರಾಜು ದ್ವಿತೀಯ ಪಿಯುಸಿ ವರೆಗೆ ಮಾತ್ರ ಓದಿಕೊಂಡಿದ್ದು, ಡಿಡಿಪಿಐ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಇನ್ನೂ ಪ್ರಕರಣ ಬೆಳಕಿಗೆ ಬಂದ ಮೇಲೆ ಮಂಡ್ಯ ಜಿಲ್ಲಾ ಶಿಕ್ಷಣ ಇಲಾಖೆ ಎಚ್ಚೆತ್ತಕೊಂಡಿದೆ. ಅನಧಿಕೃತ ಟ್ಯೂಷನ್ ಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ.
ಅನುಮತಿ ಪಡೆಯದೆ ಟ್ಯೂಷನ್ ನಡೆಸಿದ್ರೆ ಕೇಸ್ ಹಾಕಲಾಗುತ್ತದೆ ಎಂದು ಮಂಡ್ಯ ಡಿಸಿಪಿಐ ಹೊಸ ಸುತ್ತೋಲೆ ಹೊರಡಿಸಿದ್ದಾರೆ. ಅನಧಿಕೃತ ಟ್ಯೂಷನ್ ಕಂಡು ಬಂದ್ರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಕೂಡಲೇ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಅನಧಿಕೃತ ಟ್ಯೂಷನ್ ಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ ಎಂದು ಮಂಡ್ಯ ಡಿಸಿಪಿಐ ಜವರೇಗೌಡ ಖಡಕ್ ಎಚ್ಚರಿಕೆ ನೀಡಲಾಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ. ಬಾಲಕಿಯನ್ನು ಟ್ಯೂಷನ್ ಗೆ ಕರೆಸಿಕೊಂಡ ಶಿಕ್ಷಕ ನಂತರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಭೀತಾಗಿದೆ. ಬಂಧಿತ ಶಿಕ್ಷಕನನ್ನು ಕಾಂತ್ ರಾಜ್ ಎಂದು ಗುರುತಿಸಲಾಗಿದೆ. ಟ್ಯೂಷನ್ ಗೆ ಬಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಪೋಷಕರಿಗೆ ಗೊತ್ತಾದರೆ ಅಪಾಯ ಎಂದು ಭಾವಿಸಿದ ಈತ ಬಾಲಕಿ ತಲೆಗೆ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ , ಬಳಿಕ ಸಂಪ್ ಗೆ ಎಸೆದಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಐಪಿಸಿ 302 ಹಾಗೂ ಪೋಕ್ಸೋ ಕಾಯಿದೆಯಡಿ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.
ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿತ್ತು. ಮಂಗಳವಾರ ಬೆಳಗ್ಗೆ ಟ್ಯೂಷನ್ ಗಾಗಿ ಮನೆಯಿಂದ ಹೋಗಿದ್ದ ವಿದ್ಯಾರ್ಥಿನಿ ಬಳಿಕ ಮನೆಗೆ ವಾಪಸ್ ಬಂದಿರಲಿಲ್ಲ. ನಂತರ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಕಟ್ಟಡದ ಸಮೀಪದಲ್ಲಿ ಪರಿಶೀಲಿಸಿದಾಗ ನೀರಿನ ಸಂಪ್ ಒಳಗೆ ಬಾಲಕಿಯ ಶವ ಪತ್ತೆಯಾಗಿತ್ತು. ಟ್ಯೂಷನ್ ಕೇಂದ್ರದ ಉಸ್ತುವಾರಿ ಶಿಕ್ಷಕನೇ ಈ ಕೃತ್ಯ ಎಸಗಿರುವುದು ಸಾಭೀತಾಗಿದೆ.
ನ. 1ರಂದು ಎಲ್ಲರ ಮನೆಯ ಮೇಲೆ ಕನ್ನಡಧ್ವಜ ಹಾರಿಸೋಣ – ನಾಡೋಜ ಡಾ. ಮಹೇಶ ಜೋಶಿ ಕರೆ