ಮಂಡ್ಯ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ಸಕ್ಕರೆನಾಡು ಮಂಡ್ಯದಲ್ಲಿ ಹಾಡು ಹಗಲೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ಹೀಗಾಗಿ ಮಂಡ್ಯ ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾಗನೂರು ಬಳಿ ಈ ಘಟನೆ ನಡೆದಿದೆ. ರೆಸ್ಟೋರೆಂಟ್ ನಲ್ಲಿ ಮದ್ಯ ಸೇವಿಸುತ್ತಾ ಕುಳಿತಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿಯಲಾಗಿದೆ. ಚಾಕುವಿನಿಂದ ಇರಿತದಿಂದ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಮಳವಳ್ಳಿ ಪಟ್ಟಣದ NES ಬಡಾವಣೆ ನಿವಾಸಿ ಯೋಗೇಶ (40) ಕೊಲೆಯಾದ ದುರ್ದೈವಿಯಾಗಿದ್ದಾರೆ. ಇಬ್ಬರು ಸ್ನೇಹಿತರ ಜೊತೆ ಬೈಕ್ ನಲ್ಲಿ ರೆಸ್ಟೋರೆಂಟ್ ಗೆ ಬಂದಿದ್ದ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೊಲೆಗೂ ಮುನ್ನಾ ಜೊತೆಯಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಈ ವೇಳೆ ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ರೆಸ್ಟೋರೆಂಟ್ ಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಮನಸ್ಸೋ ಇಚ್ಚೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಮಳವಳ್ಳಿ ಪೊಲೀಸರು ಭೇಟಿ ,ಸ್ಥಳ ಪರಿಶೀಲನೆ ನಡೆಸಿದರು. ಹಳೆಯ ದ್ವೇಷದಿಂದ ಕೊಲೆಗೈದಿರುವ ಬಗ್ಗೆ ಪೊಲೀಸರ ಶಂಕೆ ವ್ಯಕ್ತವಾಗಿದೆ. ಕೊಲೆಗೈದು ಪರಾರಿಯಾಗಿರೋ ಅರೋಪಿಗಳಿಗಾಗಿ ಪೊಲೀಸರ ಶೋಧಕಾರ್ಯ ನಡೆಸುತ್ತಿದ್ದಾರೆ. ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾಡುಹಗಲೇ ನಡೆದ ಬರ್ಬರ ಹತ್ಯೆ ಕಂಡು ಬೆಚ್ಚಿ ಬಿದ್ದಿದ್ದಾರೆ.
ವರದಿ: ಗಿರೀಶ್ ರಾಜ್, ಮಂಡ್ಯ