ಮಂಡ್ಯ : ಇದೇ ಮೊದಲ ಬಾರಿಗೆ ನಾಳೆ ಶುಕ್ರವಾರ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಬಗೆಹರಿಸಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಬೇರುಮಟ್ಟದಿಂದ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಏಳು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ.ಎಲ್ಲ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸಮರ್ಥ ಅಭ್ಯರ್ಥಿಗಳಿದ್ದಾರೆ. ಕಾರ್ಯಕ್ರಮದ ಯಶಸ್ವಿಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ,ರಾಜ್ಯದ ಸಚಿವರು, ಪಕ್ಷದ ರಾಜ್ಯಾಧ್ಯಕ್ಷರು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಿಕೆ ಸಂಬಂಧ ಈಗಾಗಲೇ ಸಿಎಂ ಸಮಾಜದ ಎಲ್ಲ ಜನಪ್ರತಿನಿಧಿಗಳು ಮನವಿ ಸಲ್ಲಿಸಿದ್ದೇವೆ. ಈ ವಿಚಾರದಲ್ಲಿ ನಮಗೆ ನ್ಯಾಯ ದೊರೆಯುವ ವಿಶ್ವಾಸ ಇದೆ ಎಂದು ಹೇಳಿದರು.
ವರದಿ: ಗಿರೀಶ್ ರಾಜ್, ಮಂಡ್ಯ
3 ಕೋಟಿ ‘ಭಾರತೀಯ ರೈಲ್ವೆ ಬಳಕೆದಾರ’ರ ಡೇಟಾ ಸೋರಿಕೆ | Indian Railway Data leak
BREAKING NEWS: ವಾಣಿಜ್ಯ ಚಟುವಟಿಕೆಗಳಿಗೆ ಬಿಬಿಎಂಪಿ ಹೊಸ ರೂಲ್ಸ್; ಪಿಜಿ, ಹೋಟೆಲ್,ಬೇಕರಿಗಳಿಗೆ ನೋಟಿಸ್