ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು.
ಇಂದು ಮಂಡ್ಯದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪೊಲೀಸರು ದಿನವಿಡಿ ಬಿಸಿಲು,ಮಳೆ,ಗಾಳಿ, ಹಬ್ಬ ಹರಿದಿನ ಮರೆತು ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ನಾವು ಇಂದು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ ಎಂದು ಹೇಳಿದರು.
ಪೊಲೀಸರು ಇಂತಹಾ ಒಂದು ತ್ಯಾಗಮಯ ಜೀವನವನ್ನು ನಡೆಸುತ್ತಿದ್ದಾರೆ. ಇದಕ್ಕೆ ಅವರ ಕುಟುಂಬವೂ ಸಹ ಬೆನ್ನೆಲುಬಾಗಿ ನಿಂತಿದೆ. ನಮ್ಮ ನೆಮ್ಮದಿಗಾಗಿ ಹುತಾತ್ಮರಾದ ಪೊಲೀಸರನ್ನು ಕೇವಲ ಒಂದು ದಿನಕ್ಕೆ ಸೀಮಿತ ಮಾಡಿದೆ ದಿನವೂ ಸ್ಮರಿಸಬೇಕು ಎಂದು ಅಭಿಪ್ರಾಯಪಟ್ಟರು.
ಕಳೆದ ಹದಿನೆಂಟು ವರ್ಷಗಳಿಂದ ನಾನು ಕರ್ತವ್ಯದಲ್ಲಿ ಪೊಲೀಸರೊಂದಿಗೆ ಭಾಗಿಯಾಗಿದ್ದೇನೆ. ನಮ್ಮ ಕುಟುಂಬಕ್ಕಿಂತ ಹೆಚ್ಚು ಕಾಲ ಪೊಲೀಸರೊಂದಿಗೆ ಕೋರ್ಟ್ ನಲ್ಲಿ ಕಾಲ ಕಳೆದಿದ್ದೇನೆ. ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ಶ್ರಮವಹಿಸಿ ಕರ್ತವ್ಯ ನಿಷ್ಠೆಯನ್ನು ಪೊಲೀಸರು ಮೆರೆಯುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
BREAKING: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಹಲ್ಲೆಗೈದ ಮುಖ್ಯ ಶಿಕ್ಷಕ ಅರೆಸ್ಟ್
ಬೆಂಗಳೂರು ಜನತೆ ಗಮನಕ್ಕೆ: ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ