ಬೆಂಗಳೂರು: ಮಂಡ್ಯದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದರ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿಷಾದ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದಿದ್ದಾರೆ.
ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂಬುದಾಗಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು.
ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ…— CM of Karnataka (@CMofKarnataka) March 16, 2025
ಉತ್ತರ ಮೆಸಿಡೋನಿಯಾದ ನೈಟ್‌ಕ್ಲಬ್‌ನಲ್ಲಿ ಭೀಕರ ಬೆಂಕಿ ಅವಘಡ: ಕನಿಷ್ಠ 50 ಮಂದಿ ಸಾವು
SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!