ಮಂಡ್ಯ : ಮಂಡ್ಯ ಲೋಕಸಭಾ ರಣಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ವಾರ್ ಚಂದ್ರು) ಸೋಮವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನಾ ಟೆಂಪಲ್ ರನ್ ಮಾಡಿದ್ದ ಅವರು, ಶ್ರೀ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ಕಾಲ ಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು.
BREAKING : ಮೈಸೂರಲ್ಲಿ ‘JDS’ಗೆ ಮತ್ತೊಂದು ಶಾಕ್ : ‘ತೆನೆ’ ಇಳಿಸಿ ‘ಕೈ’ ಹಿಡಿದ ಮಾಜಿ ಶಾಸಕ ಭಾರತಿ ಶಂಕರ್
ಮಂಡ್ಯ ನಗರದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಬೆಳಿಗ್ಗೆ 10.30 ರ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕದಲೂರು ಉದಯ್, ಪುಟ್ಟಸ್ವಾಮಿಗೌಡ, ಶರತ್ ಬಚ್ಚೇಗೌಡ, ಗಣಿಗ ರವಿಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿದರು.
ಚುನಾವಣೆ ವೇಳೆ ಮತದಾರಿಗೆ ಆಮಿಷ ಒಡ್ಡದಂತೆ ಕ್ರಮ ಕೋರಿ ‘PIL’ ಸಲ್ಲಿಕೆ : 2 ವಾರಗಳ ಕಾಲ ವಿಚಾರಣೆ ಮುಂದೂಡಿದ ಹೈಕೋರ್ಟ್
ಬಳಿಕ ತೆರೆದ ವಾಹನದಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಕಾಂಗ್ರೇಸ್ ಅಭ್ಯರ್ಥಿ ಸ್ವಾರ್ ಚಂದ್ರು ತಮ್ಮ ಬಲ ಪ್ರದರ್ಶನ ಮಾಡಿದರು.ನಂತರ 1.15 ರ ವೇಳೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಹಾಗೂ ರೈತ ನಾಯಕಿ ಸುನೀತಾ ಪುಟ್ಟಣ್ಣಯ್ಯ (ಶಾಸಕ ದರ್ಶನ ಪುಟ್ಟಣ್ಣಯ್ಯ ತಾಯಿ ) ಅವರೊಟ್ಟಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ ಅವರು ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.
ಅವಹೇಳನಕಾರಿ ಹೇಳಿಕೆ: ದಿಲೀಪ್ ಘೋಷ್, ಸುಪ್ರಿಯಾ ಶ್ರಿನಾಟೆ ವಿರುದ್ಧ ಚುನಾವಣಾ ಆಯೋಗ ಗರಂ
ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದೇನೆ. ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ನನ್ನ ಗೆಲುವಿಗೆ ಪಕ್ಷದ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆಯಾಗಲಿದೆ. ಸರ್ವರ ಅಭಿವೃದ್ಧಿಗಾಗಿ ಶ್ರಮಿಸುವ ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದ ಮತದಾರರು ಬೆಂಬಲಿಸಲಿದ್ದು, ಇದಕ್ಕೆ ಇಂದು ಮಂಡ್ಯದಲ್ಲಿ ಸೇರಿದ ಜನಸಾಗರವೇ ಸಾಕ್ಷಿ ಎಂದು ಹೇಳಿದರು.
ವರದಿ : ಗಿರೀಶ್ ರಾಜ್ ಮಂಡ್ಯ