ಮಂಡ್ಯ: ಜಿಲ್ಲೆಯಲ್ಲಿ ಇಂದು ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆದಿರುವಂತ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಈ ಹೆಜ್ಜೇನು ದಾಳಿಯಲ್ಲಿ ಮೂವರು ಪ್ರವಾಸಿಗರು ಗಾಯಗೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ಬಳಿಯ ಪ್ರವಾಸಿ ಸ್ಥಾನ ಕಾವೇರಿ ಸಂಗಮದಲ್ಲಿ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆದಿದೆ. 15ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ.
ಹೆಜ್ಜೇನು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವಂತ ಮೂವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನುಳಿದ ಗಾಯಾಳುಗಳನ್ನು ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಸರಿಯಾದ ವಾದ ಮಂಡಿಸಿಲ್ಲ: ಆರ್.ಅಶೋಕ್
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು