ಮಂಡ್ಯ : ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದ ಶ್ರೀ ಮದ್ದೂರಮ್ಮನ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ದುರ್ಘಟನೆ ಭಾನುವಾರ ಸಂಜೆ ಜರುಗಿದೆ.
ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು (14) ಮತ್ತು ತೇಜಸ್ ರವರ ಪುತ್ರ ರಂಜು (17) ಮೃತಪಟ್ಟ ಯುವಕರಾಗಿದ್ದಾರೆ.
ಇಬ್ಬರು ಯುವಕರು ಭಾನುವಾರ ಮಧ್ಯಾಹ್ನ ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾರೆ. ಕೆಲಕಾಲ ಆಟವಾಡಿದ್ದು, ಬಳಿಕ ಕೆರೆ ನೀರಿನ ಆಳಕ್ಕೆ ಹೋದ ಪರಿಣಾಮ ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಐವರು ಯುವಕರು ಕೆರೆಗೆ ಈಜಲು ಹೋಗಿದ್ದು, ಇಬ್ಬರು ಮೃತಪಟ್ಟಿದ್ದು, ಮೂವರು ಸ್ಥಳದಿಂದ ಆತಂಕಗೊಂಡು ಓಡಿ ಹೋಗಿದ್ದಾರೆ.
ಮೃತ ಯುವಕ ಮುತ್ತುರಾಜು ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದು, ರಂಜು ಸೋಮನಹಳ್ಳಿಯ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಮತ್ತು ಪೋಲೀಸರು ಮೃತದೇಹಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ
ಚನ್ನಪಟ್ಟಣ ಉಪಚುನಾವಣೆಗೆ ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್
Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ