ಮಂಡ್ಯ : ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ, ಮದ್ದೂರು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮದ್ದೂರು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಯಾವ ಘೋಷಣೆ ಕೂಗದ ಪ್ರತಿಭಟನಕಾರರು, ಮೌನವಾಗಿ ಕುಳಿತುಕೊಂಡೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗೇಗೌಡ ಮಾತನಾಡಿ, ನಾವು ತಾಂತ್ರಿಕವಾಗಿ ಅನುಭವಿ ಸಿಬ್ಬಂದಿಯಲ್ಲ. ಆದರೂ, ಸರ್ಕಾರ ವಹಿಸಿದ ತಾಂತ್ರಿಕ ಕೆಲಸ ನಿರ್ವಹಿಸುತ್ತಿದ್ದೇವೆ. ಮೂಲಸೌಕರ್ಯ ವಿಚಾರವಾಗಿ ಕಡೆಗಣನೆಗೆ ಒಳಗಾಗಿದ್ದೇವೆ. ಹಾಗಾಗಿ ಕೆಲಸಕ್ಕೆ ಸಾಮೂಹಿಕವಾಗಿ ರಜೆ ಹಾಕಿ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿದ್ದೇವೆ ಎಂದರು.
ತಾಲೂಕಿನಾದ್ಯಂತ ಕೆಲಸ ಮಾಡುತ್ತಿರುವ ನಮಗೆ ಸುಸಜ್ಜಿತವಾದ ಕಚೇರಿ ಕಲ್ಪಿಸಬೇಕು. ಅಲ್ಲಿ ಗುಣಮಟ್ಟದ ಪೀಠೋಪಕರಣಗಳು, ಅಂತರ್ಜಾಲ ವ್ಯವಸ್ಥೆ ಒದಗಿಸಬೇಕು. ಸಂಯೋಜನೆ, ಇ-ಆಫೀಸ್, ಗರುಡ, ಭೂಮಿ, ನವೋದಯ, ದಿಶಾಂಕ ಮತ್ತಿತರ ತಂತ್ರಾಂಶಗಳ ನಿರ್ವಹಣೆಗೆ ಹೆಚ್ಚಿನ ಡೇಟಾ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನು ನೀಡಬೇಕು’ ಎಂದು ಗ್ರಾಮ ಆಡಳಿತ ಅಧಿಕಾರಿಗಳು ಒತ್ತಾಯಿಸಿದರು.
ಅಧಿಕಾರಿಗಳ ಬೇಡಿಕೆಗಳೇನು.
ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು.
ಕಛೇರಿ, ಗುಣಮಟ್ಟದ ಮೊಬೈಲ್, ಡೇಟಾ ಸಿಮ್ ನೀಡಬೇಕು.
ಪ್ರೀಂಟರ್ ಹಾಗೂ ಸ್ಕ್ಯಾನರ್, ಲ್ಯಾಪ್ಟಾಪ್, ಗೂಗಲ್ ಕ್ರೋಮ್ ಬುಕ್ ಒದಗಿಸಬೇಕು.
ಸರ್ಕಾರಿ ರಜಾ ದಿನಗಳಂದು ಮೊಮೊ ಕೊಡುವ ಅಧಿಕಾರಿಗಳ ವಿರುದ್ದ ಕ್ರಮ.
ಅಂತರ ಜಿಲ್ಲಾ ವರ್ಗಾವಣೆ ನಿಯಮ 16 (ಎ) ಉಪಖಂಡ (2) ಮರು ಸೇರ್ಪಡೆ.
ಪತಿ – ಪತ್ನಿ ವರ್ಗಾವಣೆ ಪ್ರಕರಣವನ್ನು ಪರಿಗಣಿಸಬೇಕು.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನು ಆಹಾರ ನಿರೀಕ್ಷಕ ಹುದ್ದೆಗೆ ಪದೋನ್ನತಿ.
ಕೆಲಸದ ಅವಧಿ ಮುಗಿದ ಬಳಿಕ ಇಲಾಖೆಯ ವರ್ಚುವಲ್ ಸಭೆಗಳನ್ನು ನಡೆಸಬಾರದು.
ಪ್ರಯಾಣ ಭತ್ಯೆಯನ್ನು 500 ರೂ. ಗಳಿಂದ 3000 ರೂ. ಗಳಿಗೆ ಹೆಚ್ಚಳ.
ಕರ್ತವ್ಯ ನಿರತದಲ್ಲಿ ಸಾವನ್ನಪ್ಪಿದರೆ ಅವರ ಕುಟುಂಬಸ್ಥರಿಗೆ 25 ಲಕ್ಷ ರೂ ಪರಿಹಾರ ನೀಡಬೇಕು.
ಈ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಅನಿರ್ಧಿಷ್ಟಾವಧಿ ಮುಷ್ಕರ ಕೈ ಬಿಡುವುದಿಲ್ಲ ಎಂದು ಸಂಘದ ಅಧ್ಯಕ್ಷ ನಿಂಗೇಗೌಡ ಎಚ್ಚರಿಕೆ ನೀಡಿದರು.
ವರದಿ : ಗಿರೀಶ್ ರಾಜ್, ಮಂಡ್ಯ
‘ಕಸ್ತೂರಿ ರಂಗನ್ ವರದಿ’ ತಿರಸ್ಕಾರಕ್ಕೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಮಹತ್ವದ ನಿರ್ಧಾರ
‘ಪ್ರೌಢ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಇಂಟರ್ನೆಟ್’ ನೀಡಲು ನಿರ್ಧಾರ