Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM

BREAKING : ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ : PSI, ಚಾಲಕನಿಗೆ ಗಂಭೀರ ಗಾಯ

14/05/2025 8:08 PM

BREAKING : ಕೆಲಸ ಕೊಡಿಸೋದಾಗಿ ಆಮಿಷ ಒಡ್ಡಿ, 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಆತಿಥ್ಯ ನೆನೆಯಬೇಕು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ
KARNATAKA

ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಆತಿಥ್ಯ ನೆನೆಯಬೇಕು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ

By kannadanewsnow0918/11/2024 6:10 PM

ಮಂಡ್ಯ: ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಜರುಗಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಎಲ್ಲರ ಸಹಕಾರ, ಬೆಂಬಲ ಅತ್ಯವಶ್ಯಕ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು.

ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಜಿಲ್ಲೆಯ ಸಾಹಿತಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಮಂಡ್ಯದ ಆತಿಥ್ಯ, ಸತ್ಕಾರವನ್ನು ಎಲ್ಲರೂ ನೆನೆಯಬೇಕು. ಆ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮಂಡ್ಯಕ್ಕೆ ತನ್ನದೇ ಆದ ಸೊಗಡಿದೆ. ವೈಶಿಷ್ಟ್ಯ ಇದೆ. ನೂರಕ್ಕೆ ನೂರು ಈ ಸಮ್ಮೇಳನ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ಎಲ್ಲರ ಸಲಹೆ, ಮಾರ್ಗದರ್ಶನ, ಅಭಿಪ್ರಾಯ ಪಡೆಯಲಾಗುತ್ತಿದೆ. ಜನಸಾಮಾನ್ಯರಾದಿಯಾಗಿ ಎಲ್ಲರ ಸಲಹೆಗಳನ್ನು ಸ್ವೀಕರಿಸಿ, ಸಮಿತಿಯೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಸಾಹಿತ್ಯ ಸಮ್ಮೇಳನದ ಕುರುಹು ಉಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಕಲಾಮಂದಿರ ದುರಸ್ತಿ ಕಾರ್ಯ ವಾರದಲ್ಲಿ ಪೂರ್ಣಗೊಳ್ಳಲಿದೆ. ಅಂಬೇಡ್ಕರ್ ಭವನ ರೆಡಿಯಾಗಲಿದೆ. ರೈತ ಭವನಕ್ಕೆ ಚಾಲನೆ ನೀಡಲಾಗಿದೆ. ಶಿವಪುರ ಧ್ವಜ ಸತ್ಯಾಗ್ರಹ ಪ್ರತಿಷ್ಠಾನ ರಚನೆ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿ ಇದೆ. ಮೂವತ್ತು ವರ್ಷದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ.ಕೃಷಿ ವಿವಿ, ಸಕ್ಕರೆ ಕಾರ್ಖಾನೆ ಪುನರಾರಂಭಿಸಲಾಗಿದೆ. ನೂತನ ಸಕ್ಕರೆ ಕಾರ್ಖಾನೆ ಬಗ್ಗೆ ಸಂಪುಟದ ಚರ್ಚೆಗೆ ಕಳುಹಿಸಲಾಗಿದೆ. ಅಭಿವೃದ್ಧಿ ನಿರಂತರ, ಸಾಹಿತ್ಯ ಸಮ್ಮೇಳನ ವಿಶೇಷ. ಮೂವತ್ತು ವರ್ಷಗಳ ನಂತರ ನಡೆಯುತ್ತಿರುವ ಈ ಸಮ್ಮೇಳನವನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ನೆರವೇರಿಸಲಾಗುವುದು. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ಕರ್ನಾಟಕ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಕಾರ್ಯದರ್ಶಿಗಳಾದ ಡಾ. ಕೃಷ್ಣೇಗೌಡ ಹುಸ್ಕೂರು, ವಿ ಹರ್ಷ ಸೇರಿದಂತೆ ಇನ್ನಿತರರ ಹಿರಿಯ ಸಾಹಿತಿಗಳು ಉಪಸ್ಥಿತರಿದ್ದರು.

ಕನ್ನಡಿಗರ ಮನ-ಮನೆಗಳ ಹಬ್ಬ: ಜಿಲ್ಲಾಧಿಕಾರಿ ಡಾ. ಕುಮಾರ

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನವಲ್ಲ ಇದು ಎಲ್ಲಾ ಕನ್ನಡಿಗರ ಮನ ಮನೆಯ ಸಮ್ಮೇಳನ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದರು.

ಎಲ್ಲಾ ಕನ್ನಡಿಗರ ಮನಸ್ಸುಗಳು ಸೇರಿ ನಾವೆಲ್ಲ ಒಂದು ಎಂಬ ಅಭಿಮಾನ ಮೂಡಿಸಲು ಸರ್ವರ ಸಹಕಾರದ ಅವಶ್ಯಕತೆ ಇದ. ಸಮ್ಮೇಳನದಲ್ಲಿ ಸಾಹಿತಿಗಳ ಸಹಕಾರ ಬಹಳ ಮುಖ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಸಮ್ಮೇಳನದ ಪ್ರತಿಯೊಂದು ಕೆಲಸದಲ್ಲೂ ಮಾರ್ಗದರ್ಶನ ಸಹಕಾರ ನೀಡುತ್ತಾ ಬಂದಿದ್ದಾರೆ. 28 ಸಮಿತಿಗಳು ಈಗಾಗಲೇ  ರಚನೆ ಮಾಡಿಕೊಂಡಿದ್ದು ಎಲ್ಲಾ ಸಮಿತಿಯವರು ಕೂಡ ಸುಮಾರು 5 ರಿಂದ 6 ಭಾರಿ ಸಭೆ ನಡೆಸಿ ಈಗಾಗಲೇ ಕ್ರಿಯಾಯೋಜನೆ ರೂಪಿಸಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯ ಸಾಂಸ್ಕೃತಿಕ ಶ್ರೀಮಂತಿಕೆ ಬಿಂಬಿಸಲಿ: ನರಹಳ್ಳಿ ಬಾಲಸುಬ್ರಹ್ಮಣ್ಯ

ಮಂಡ್ಯ ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆ. ಸಮ್ಮೇಳನದಲ್ಲಿ ಜಿಲ್ಲೆಯ ಸಾಂಸ್ಕೃತಿಕ, ಶ್ರೀಮಂತ ಪರಂಪರೆ ಬಿಂಬಿಸಬೇಕು. ರಾಜ್ಯಮಟ್ಟದಲ್ಲಿ ಮಂಡ್ಯ ಜಿಲ್ಲೆ ಪ್ರತಿನಿಧಿಸಬೇಕು ಎಂದು ಬಹುಮುಖಿ ಚಿಂತಕರು, ಬರಹಗಾರರಾದ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಹೇಳಿದರು.

ಯಕ್ಷಗಾನ ಕಲೆಯ ಮೂಲ ಮಂಡ್ಯ. ಯಕ್ಷಗಾನದ ತವರು ಮಂಡ್ಯ. ಕೆಂಪಣ್ಣಗೌಡ ಮೊದಲ ಕವಿ. ಮೂಡಲಪಾಯ ಕಲೆ ಮತ್ತೆ ಬೆಳಕಿಗೆ ಬರಬೇಕು. ಮಂಡ್ಯ ಜಿಲ್ಲೆಯ ಕೊಡುಗೆಗಳನ್ನು ಕೇಂದ್ರವಾಗಿಟ್ಟುಕೊಂಡು  ಚರ್ಚೆಯಾಗಬೇಕು. ರಾಜ್ಯಮಟ್ಟದ ವಿದ್ವಾಂಸರನ್ನು ಕರೆಸಬೇಕು ಎಂದು ಸಲಹೆ ನೀಡಿದರು.

ಕೃಷಿ ಸಂಸ್ಕೃತಿಗೆ ಮಂಡ್ಯ ಕೊಡುಗೆ ಅಪಾರ.  ನೇಗಿಲಯೋಗಿ ಪರಿಕಲ್ಪನೆ ಚರ್ಚೆಯಾಗಬೇಕು. ಸಮ್ಮೇಳನಕ್ಕೆ ಘನತೆಯೇ ಗೋಷ್ಠಿ. ಗೋಷ್ಠಿ ಬಗ್ಗೆ ಚರ್ಚೆ ಆಗಬೇಕು. ಸಾಹಿತ್ಯ, ಕೃಷಿ, ಸಂಸ್ಕೃತಿ ಮತ್ತು ಜಾನಪದ ಗೋಷ್ಠಿಯಾಗಬೇಕು. ಅನುವಾದ ಗೋಷ್ಠಿ ಆರಂಭಿಸುವ ಮೂಲಕ ಅನುವಾದ ಗೋಷ್ಠಿ  ಮೊದಲು ಮಾಡಿದ ಕೀರ್ತಿ ಮಂಡ್ಯ ಸಮ್ಮೇಳನಕ್ಕೆ ಸಲ್ಲಬೇಕು ಎಂದರು.

ದಿನೇಶ್ ಗೂಳಿಗೌಡರಿಗೆ ಅಭಿನಂದನೆ

ಜಿಲ್ಲೆಯ ಸಾಹಿತಿಗಳನ್ನೆಲ್ಲಾ ಆಹ್ವಾನಿಸಿ ಸಮಾಲೋಚನಾ ಸಭೆ ಆಯೋಜನೆಗೆ ಕಾರಣರಾದ ಶಾಸಕ ದಿನೇಶ್ ಗೂಳಿಗೌಡ ಅವರಿಗೆ ಅಭಿನಂದನೆಗಳು. ಸಾಹಿತ್ಯ ಸಮ್ಮೇಳನದ ನೆನಪು ಉಳಿಯುವ ಕಾರ್ಯ ಆಗಬೇಕು ಎಂದು ಕನ್ನಡ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಗೌಡ ಅವರು ಹೇಳಿದರು.

ಮಂಡ್ಯ ಮಾದರಿ ಇಟ್ಟುಕೊಂಡು ಸಮ್ಮೇಳನ ಆಯೋಜಿಸಲಿ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕು. ಜಿ.ನಾರಾಯಣ್, ಶಂಕರೇಗೌಡ್ರು,
ಸಾಹುಕಾರ್ ಚೆನ್ನಾಯ್ಯ, ಶೀಂಕಠೇಗೌಡ್ರ ಹೆಸರನ್ನು ಮಹಾದ್ವಾರಗಳಿಗೆ ಇಡಬೇಕು. ಜಿಲ್ಲೆಯ ಮಹನೀಯರನ್ನು ನೆನೆಯಬೇಕು ಎಂದು ಹೇಳಿದರು.

ಸಮಾಲೋಚನಾ ಸಭೆಯಲ್ಲಿ ವ್ಯಕ್ತವಾದ ಪ್ರಮುಖ ಸಲಹೆಗಳು

ಮಂಡ್ಯ ಜಿಲ್ಲೆಗೆ ಪ್ರತ್ಯೇಕ ಗೋಷ್ಠಿ ಮೀಸಲಿರಿಸಬೇಕು. ನಾಡು, ನುಡಿ, ನೀರಿಗಾಗಿ ಹೋರಾಟ ಮಾಡಿದವರ ನೆನೆಯುವ ಗೋಷ್ಠಿ ಇರಬೇಕು

ಯುವ ಸಾಹಿತ್ಯ, ಮಕ್ಕಳ ಸಾಹಿತ್ಯದ ಬಗ್ಗೆ ಚರ್ಚೆಯಾಗಬೇಕು. ಮಹಿಳೆಯರಿಗೆ ಆದ್ಯತೆ ನೀಡಬೇಕು. ಮಹಾಕಾವ್ಯಗಳ ಬಗ್ಗೆ ಗೋಷ್ಠಿಯಾಗಬೇಕು.

ಉಪವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮುದ್ರಣಕಾರರಿಗೆ ಸಹಾಯಹಸ್ತ ನೀಡಬೇಕು

ನಶಿಸುತ್ತಿರುವ ತೊಗಲುಬೆಂಬೆ ಕಲೆ ಪ್ರದರ್ಶನಕ್ಕೆ ಒತ್ತು ಕೊಡಬೇಕು. ತೊಗಲುಬೊಂಬೆ ಶ್ರೀಮಂತಿಕೆ ಪರಿಚಯಿಸಬೇಕು.

ಜಿಲ್ಲೆಯ ಎಲ್ಲಾ ಲೇಖಕರ ಪುಸ್ತಕ ಪ್ರದರ್ಶನ ಏರ್ಪಾಡು ಮಾಡಿ ಮಂಡ್ಯ ಜಿಲ್ಲಾ ಸಾಹಿತ್ಯ ಪುಸ್ತಕ ಪ್ರದರ್ಶನ ಮಾಡಬೇಕು.

ಮುದ್ರಣಗೊಳ್ಳುವ ಪುಸ್ತಕಗಳಲ್ಲಿ ಸಾಹಿತಿಗಳ ಫೋಟೋ ಮಾತ್ರ ಇರಬೇಕು.

ಕಾಲೇಜು, ಹೈಸ್ಕೂಲ್ ಗಳಿಗೆ ಸಂಚಾಲಕರನ್ನು ನೇಮಿಸಿ ಕನ್ನಡ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಬೇಕು

ಎಲ್ಲಾ ವರ್ಗದ ವಚನಕಾರರ ವಚನಗೋಷ್ಠಿ ಇರಬೇಕು. ಸಮ್ಮೇಳನ ನೆನಪಿಗೆ 87 ಪುಸ್ತಕಗಳನ್ನು ಬಿಡುಗಡೆ ಮಾಡಬೇಕು.

BREAKING: ಚಿರತೆ ದಾಳಿಯಲ್ಲಿ ಮಹಿಳೆ ಸಾವು ಕೇಸ್: ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ – ACF ಘೋಷಣೆ – Kannada News | India News | Breaking news | Live news | Kannada | Kannada News | Karnataka News | Karnataka News

BREAKING : ಕೊಪ್ಪಳದಲ್ಲಿ ಜಿಲ್ಲಾಸ್ಪತ್ರೆಯ ಬಳಿಯೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನರ್ಸಿಂಗ್ ಆಫೀಸರ್! – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM1 Min Read

BREAKING : ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ : PSI, ಚಾಲಕನಿಗೆ ಗಂಭೀರ ಗಾಯ

14/05/2025 8:08 PM1 Min Read

BREAKING : ಕೆಲಸ ಕೊಡಿಸೋದಾಗಿ ಆಮಿಷ ಒಡ್ಡಿ, 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM1 Min Read
Recent News

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

14/05/2025 8:26 PM

BREAKING : ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ : PSI, ಚಾಲಕನಿಗೆ ಗಂಭೀರ ಗಾಯ

14/05/2025 8:08 PM

BREAKING : ಕೆಲಸ ಕೊಡಿಸೋದಾಗಿ ಆಮಿಷ ಒಡ್ಡಿ, 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM
State News
KARNATAKA

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

By kannadanewsnow0914/05/2025 8:26 PM KARNATAKA 1 Min Read

ಬೆಂಗಳೂರು : ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ ಎಂದು ಮುಖ್ಯಮಂತ್ರಿ…

BREAKING : ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ : PSI, ಚಾಲಕನಿಗೆ ಗಂಭೀರ ಗಾಯ

14/05/2025 8:08 PM

BREAKING : ಕೆಲಸ ಕೊಡಿಸೋದಾಗಿ ಆಮಿಷ ಒಡ್ಡಿ, 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.