ಮಂಗಳೂರು : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣದಲ್ಲಿ ಶಿವಮೊಗ್ಗದ ಶಂಕಿತ ಉಗ್ರ ಶಾರಿಕ್ ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ.
ಹೌದು, ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಉಗ್ರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಮಾಡಿ ಸಿಕ್ಕಿ ಬಿದ್ದಿದ್ದಾನೆ ಎನ್ನಲಾಗಿದೆ.
ತುಂಗಾ ನದಿಯ ತಟದಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್(21) ಮತ್ತು ಮಂಗಳೂರಿನ ಮಾಜ್ ಮುನೀರ್ನನ್ನು(22) ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಎ1 ಆರೋಪಿಯಾಗಿದ್ದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್ ನಾಪತ್ತೆಯಾಗಿದ್ದ, ಇದಾದ ಬಳಿಕ ಈಗ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಮಾಡಿ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ.
ಆಟೋದಲ್ಲಿ ಕುಕ್ಕರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಶಾರೀಕ್ಗೆ ಈಗ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಮಂಗಳೂರು ಆಟೋ ರಿಕ್ಷಾ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಮಂಗಳೂರು ಸ್ಪೋಟದಲ್ಲಿ ಶಿವಮೊಗ್ಗದ ಶಂಕಿತ ಉಗ್ರ ಶಾರಿಕ್ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಪ್ರಕರಣದ ಕುರಿತು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
‘ಮಂಗಳೂರು ಸ್ಪೋಟ’ ಪ್ರಕರಣವನ್ನು ಕೇಂದ್ರ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಿ : K.S ಈಶ್ವರಪ್ಪ
ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣವಾಗಲಿದೆ – ಸಿಎಂ ಬಸವರಾಜ ಬೊಮ್ಮಾಯಿ