ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಿಗೆ ಇದೀಗ ಜಾರಿ ನಿರ್ದೇಶಾನಾಲಯ ಇ.ಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸಿದ್ದಾರೆ.
2022ರಲ್ಲಿ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎನ್ ಐಎ ಅಧಿಕಾರಿಗಳು ರಾಜ್ಯದ ವಿವಿಧ ಕಡೆ ದಾಳಿ ಮಾಡಿ ಹಲವರನ್ನು ಬಂಧಿಸಿ ಜೈಲಿಗಟ್ಟಿದ್ರು. ತನಿಖೆಯ ವೇಳೆ ಅಧಿಕಾರಿಗಳ ಮುಂದೆ ವಿವಿಧ ಕಡೆ ಸ್ಫೋಟಿಸಲು ಸಂಚು ರೂಪಿಸಿರುವುದು ಕೂಡ ಬೆಳಕಿಗೆ ಬಂದಿತ್ತು.
ಇಷ್ಟೆಲ್ಲಾ ಮಾಡೋದಕ್ಕೆ ಈ ಆರೋಪಿಗಳಿಗೆ ಪ್ರಮುಖವಾಗಿ ಹಣದ ಸಹಾಯ ಮಾಡಿದ್ದು ಯಾರು ಅನ್ನೋದರ ಹಿಂದಿನ ರಹಸ್ಯ ಭೇದಿಸುವುದಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂದಾಗಿದ್ದಾರೆ. ದೇಶದ ವಿವಿಧ ಕಡೆ ಬಾಂಬ್ ಸ್ಫೋಟಿಸಲು ಆರೋಪಿಗಳು ಸಂಚು ರೂಪಿಸಿದ್ದರು. ಇದಕ್ಕೆ ಬೇಕಾದ ಕಚ್ಚಾ ಸಾಮಗ್ರಿಗಳನ್ನು ಆನ್ ಲೈನ್ ಮೂಲಕ ಖರೀದಿಸಿರುವುದು ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.