ಮಂಗಳೂರು : ಪಡಿತರ ಚೀಟಿಯಲ್ಲಿ ತನ್ನ ಹೆಸರು ಸೇರಿಸಲು ಆಗದೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಲಾಭವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಇರುವುದರಿಂದ ಕೋಪಗೊಂಡ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ.
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪೋಸ್ಟ್ ಹರಿದಾಡುತ್ತಿದ್ದಂತೆ ಅವಹೇಳನ ಮಾಡಿದವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್ಎಸ್ಯುಐ ದೂರು ಸ್ವೀಕರಿಸಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆಯಲು ಸಾಧ್ಯವಾಗದೆ ಕೋಪಗೊಂಡ ಯುವಕ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಡಿಸಿಎಂ ವಿರುದ್ಧ ಅಶ್ಲೀಲ ಪದ ಬಳಸಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ದ ಅಶ್ಲೀಲವಾಗಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಿದ್ದ.
ಹೀಗಾಗಿ ಈ ಸಂಬಂಧ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದಾರೆ. ವಿಡಿಯೋ ಹರಿಬಿಟ್ಟ ಯುವಕ ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ಮೂಲದ ಯುವಕನೆಂಬ ಮಾಹಿತಿ ಸಿಕ್ಕಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.