ಬೆಂಗಳೂರು: ಕುಕ್ಕರ್ ಬ್ಲಾಸ್ಟ್ ಪೂರ್ವನಿಯೋಜಿತ ಎಂದು ಹೇಗೆ ಹೇಳುತ್ತೀರಿ ಎಂದು ಕೇಳಿದಾಗ ‘ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಗೂ ಮುನ್ನವೇ ಅಧಿಕಾರಿಗಳು ಇದನ್ನು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು? ಇದರ ಹಿಂದೆ ಯಾವ ಉಗ್ರನಿದ್ದಾನೆ? ಯಾವ ಸಂಘಟನೆ ಇದೆ? ಯಾರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ. ತನಿಖೆ ಏನಾಯ್ತು? ಮತ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿಹಾಕಲು ಈ ಷಡ್ಯಂತ್ರ ರೂಪಿಸಿದ್ದಾರೆ. ಮತದಾನದ ಕಳವು ಇಡೀ ದೇಶದಲ್ಲಿ ಆಗಿರಲಿಲ್ಲ. ಈಗ ಇದನ್ನು ಮಾಡಿ ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದರು.
BIGG NEWS : ಶಾರೀಖ್ ಕುರಿತು ಡಿಕೆಶಿ ಹೇಳಿಕೆಗೆ ಗೃಹ ಸಚಿವ ‘ಆರಗ ಜ್ಞಾನೇಂದ್ರ’ ಖಂಡನೆ
ನಗರದ ಪ್ರೆಸ್ ಕ್ಲಬ್ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ರಾಜ್ಯಕ್ಕೆ 10 ಲಕ್ಷ ಕೋಟಿ ಬಂಡವಾಳ ಬರುತ್ತಿದೆ ಎಂದು ಹೇಳಿದ್ದಾರೆ. ಇದರಲ್ಲಿ ಶಿವಮೊಗ್ಗಕ್ಕೆ, ಕರಾವಳಿ, ಉಡುಪಿ ಜಿಲ್ಲೆಗಳಿಗೆ ಯಾಕೆ ಬಂಡವಾಳ ಹೋಗುತ್ತಿಲ್ಲ? ಯಾವ ಜಿಲ್ಲೆಯಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ? ಎಂದು ಸರ್ಕಾರ ಪಟ್ಟಿ ಬಿಡುಗಡೆ ಮಾಡಲಿ ಎಂದರು.
BIGG NEWS : ಶಾರೀಖ್ ಕುರಿತು ಡಿಕೆಶಿ ಹೇಳಿಕೆಗೆ ಗೃಹ ಸಚಿವ ‘ಆರಗ ಜ್ಞಾನೇಂದ್ರ’ ಖಂಡನೆ
ಸರ್ಕಾರ ಕೇವಲ ಭಾವನೆ ಮೂಲಕ ದೇಶ ಕಟ್ಟಲು ರಾಜ್ಯ ಕಟ್ಟಲು ಹೊರಟಿದ್ದಾರೆ. ಜನರ ಹೊಟ್ಟೆಪಾಡು ಮರೆತಿದ್ದಾರೆ. ಸರ್ಕಾರ ಕೊನೆ ದಿನಗಳನ್ನು ತಲುಪಿದೆ. ಜನ ಈ ಸರ್ಕಾರ ಕಿತ್ತೊಗೆಯಲು ತೀರ್ಮಾನಿಸಿದ್ದಾರೆ. ಮಾಧ್ಯಮಗಳು ನ್ಯಾಯ ನೀಡುವ ಸ್ಥಾನದಲ್ಲಿದೆ. ನ್ಯಾಯ ನೀಡುವ ಸ್ಥಾನದಿಂದ ಅನ್ಯಾಯ ಬರಬಾರದು. ರಾಜ್ಯದ ಗೌರವ, ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಬೇಕು ಎಂದು ಪಕ್ಷದ ಅಧ್ಯಕ್ಷದ ಅಧ್ಯಕ್ಷನಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.