ಮೈಸೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ ಬೆನ್ನಲ್ಲೇ ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸರು ಅಲರ್ಟ್ ಆಗಿದ್ದಾರೆ. ನಗರದಲ್ಲಿಯೂ ಉಗ್ರ ಶಾರಿಕ್ ಮನೆ ಬಾಡಿಗೆ ಪಡೆದು ವಾಸವಾಗಿದ್ದ ಕಾರಣ, ಬಾಡಿಗೆ ನಿಯಮದವನ್ನು ಕಠಿಣಗೊಳಿಸಿದ್ದಾರೆ. ಇನ್ಮುಂದೆ ಮನೆ ಬಾಡಿಗೆ ಪಡೆಯಲು ಪೊಲೀಸರ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲಾಗಿದೆ.
ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಮೈಸೂರು ನಗರ ಪೊಲೀಸ್ ಕಮೀಷನರ್, ನಗರದಲ್ಲಿ ಯಾವುದೇ ಮನೆಯನ್ನು ಬಾಡಿಗೆ ನೀಡುವ ಮೊದಲು ಮಾಲೀಕರು ಹತ್ತಿರದ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ
ಇದಷ್ಟೇ ಅಲ್ಲದೇ ಎಲ್ಲಾ ಮಾಲೀಕರು ತಮ್ಮ ಬಾಡಿಗೆದಾರ ಮಾಹಿತಿಯನ್ನು ಪೊಲೀಸ್ ಠಾಣೆಗೆ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೇ 100 ರೂ ಅರ್ಜಿ ಶುಲ್ಕದೊಂದಿಗೆ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಮನೆ ಬಾಡಿಗೆ ನೀಡೋದಕ್ಕಾಗಿ ಅರ್ಜಿ ಸಲ್ಲಿಸಿ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯಬೇಕು. ಬ್ಯಾಚುಲರ್, ಕುಟುಂಬಸ್ಥರು, ಪೇಯಿಂಗ್ ಗೆಸ್ಟ್ ಮಾಲೀಕರು ಬೇರೆ ಬೇರೆ ಅರ್ಜಿಯನ್ನು ಸಲ್ಲಿಸಬೇಕು ಎಂದಿದ್ದಾರೆ.