ಮಂಗಳೂರು: ನಗರದಲ್ಲಿ ನಡೆದಿದ್ದಂತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಕೃತ್ಯ ನಡೆದ 24 ಗಂಟೆಯಲ್ಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಸಂಬಂಧ ರಾತ್ರಿ 1.30ರ ಸುಮಾರಿಗೆ 112ಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು.
ಈ ಪ್ರಕರಣ ಸಂಬಂಧ ಕ್ಷಿಪ್ರ ಕಾರ್ಯಾಚರಣೆ ನಡೆಸಿದಂತ ಉಳ್ಳಾಲ ಠಾಣೆಯ ಪೊಲೀಸರು ಕೃತ್ಯ ನಡೆದ 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಅಂತ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ, ಕುಂಪಲದ ಮಿಥುನ್ (30) ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ.
BREAKING: ಮೇ.2ರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಅಂತಿಮ ತೀರ್ಮಾನ: ಸಿಎಂ ಸಿದ್ಧರಾಮಯ್ಯ
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!