ಮಂಗಳೂರು : ಒಂದು ಕಡೆ ಊರಿನಲ್ಲಿ ತಂದೆ ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿದ್ದರೆ ಇನ್ನೊಂದು ಕಡೆಯಲ್ಲಿ ದುಬೈ ರಸ್ತೆ ಅಪಘಾತದಲ್ಲಿ ಮಗಳು ಸಾವನ್ನಪ್ಪಿ ಮದುವೆ ಸಿದ್ಧತೆಯಲ್ಲಿ ತೊಡಗಿದ್ದ ಪೋಷಕರು ಅಘಾತಗೊಳ್ಳುವ ಘಟನೆ ನಡೆದಿದೆ.
‘ಮೆಟ್ರೋ’ ಪ್ರಯಾಣಿಕರಿಗೆ ಸಿಹಿ ಸುದ್ದಿ : ‘ಮೆಜೆಸ್ಟಿಕ್- ಗರುಡಾಚಾರ್ ಪಾಳ್ಯ’ ನಡುವೆ ಹೆಚ್ಚುವರಿ ರೈಲು ಸಂಚಾರ
ಹೌದು ಮಂಗಳೂರಿನ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ದಂಪತಿಯ ಏಕೈಕ ಪುತ್ರಿ ವಿದಿಶಾ, ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
2019ರಲ್ಲಿ ದುಬೈಗೆ ತೆರಳಿ ಎಕ್ಸ್ಯೂಜೆಟ್ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಪ್ರತಿ ದಿನ ಕಂಪನಿಯ ಕ್ಯಾಬ್ನಲ್ಲಿ ಸಂಚರಿಸುತ್ತಿದ್ದ ವಿದಿಶಾ, ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
2027 ರ ವೇಳೆಗೆ 3,500 ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದ ‘ಬಾಷ್’| Bosch Layoffs 2024
ದುಬೈನಲ್ಲಿ ವಾಹನ ಚಾಲನಾ ಲೈಸನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ಊರಿನಲ್ಲಿ ತಂದೆ ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ಸಂಭವಿಸಿದೆ.