ದಕ್ಷಿಣಕನ್ನಡ :ಮಂಗಳೂರಿನ ಕಾವೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತಗೊಂಡು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ
ವಿಶೇಷ ಕರ್ತವ್ಯದಡಿ ತೆರಳಿದ್ದ, ಬಾಗಲಕೋಟೆಯ ಲವಲೇಶ್ವರ ನಿವಾಸಿ ಹನುಮಂತ ಲಮಾಣಿ (38) ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ
ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದರು. ಈ ಹಿಂದೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಮೂಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.