ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.
ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಪ್ರಮುಖ ಮಾಹಿತಿ: ಡಿ. 31 ರೊಳಗೆ ಇ-ಕೆವೈಸಿ ಪರಿಶೀಲಿಸಿಕೊಳ್ಳುವಂತೆ ಸೂಚನೆ
ಪಂಪ್ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಶನಿವಾರ ಸಂಜೆ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡು ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಸದ್ಯ ಸ್ಪೋಟಕ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು, ಬೋಲ್ಟ್ ಪತ್ತೆ ಹಚ್ಚಿದ್ದಾರೆ.
ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತುಗಳು ಪತ್ತೆಯಾಗಿದ್ದು, ಲಘು ತೀವ್ರ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು, ವಸ್ತುಗಳನ್ನು ಪರೀಕ್ಷೆಗಾಗಿ ಎಫ್ ಎಸ್ ಎಲ್ ತಂಡಕ್ಕೆ ಕಳುಹಿಸಲಾಗಿದೆ.