ಬಳ್ಳಾರಿ : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಇದೊಂದು ಉಗ್ರ ಕೃತ್ಯ ಎಂದು ಗೊತ್ತಾಗಿದೆ ಎಂದು ಹೇಳಿದ್ದಾರೆ.
BIG NEWS: ಉತ್ತರ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಟರ್ಕಿ: 6 ಮಂದಿ ಸಾವು, 80 ಕ್ಕೂ ಹೆಚ್ಚು ಜನರಿಗೆ ಗಾಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಆಟೋ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಶಂಕಿತರ ಗುರುತು ಪತ್ತೆ ಹೆಚ್ಚಿದ್ದಾರೆ. ಇದೊಂದು ಉಗ್ರ ಕೃತ್ಯ ಎಂದು ಗೊತ್ತಾಗಿದೆ. ಶಂಕಿತನಿಗೆ ಭಯೋತ್ಪಾದಕರ ಸಂಪರ್ಕ ಇರುವ ಮಾಹಿತಿ ಇದೆ ಎಂದು ಹೇಳಿದ್ದಾರೆ.
ನಿನ್ನೆ ಸಂಜೆ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡು ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಸದ್ಯ ಸ್ಪೋಟಕ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು, ಬೋಲ್ಟ್ ಪತ್ತೆ ಹಚ್ಚಿದ್ದಾರೆ.
ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತುಗಳು ಪತ್ತೆಯಾಗಿದ್ದು, ಲಘು ತೀವ್ರ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು, ವಸ್ತುಗಳನ್ನು ಪರೀಕ್ಷೆಗಾಗಿ ಎಫ್ ಎಸ್ ಎಲ್ ತಂಡಕ್ಕೆ ಕಳುಹಿಸಲಾಗಿದೆ.
BREAKING NEWS : ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ : ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!