ಮಂಗಳೂರು: ಇಲ್ಲಿನ ಕರ್ನಾಟಕ-ಕೇರಳ ಗಡಿ ಭಾಗವಾಗಿರುವಂತ ತಲಪಾಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಒಂದು ಹಿಂದೆ ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿಯಾದ ಪರಿಣಾಮ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಆ ಭಯಾನಕ ಬೆಚ್ಚಿ ಬೀಳಿಸುವಂತ ವೀಡಿಯೋ ಕೆಳಗಿದೆ ನೋಡಿ.
ಮಂಗಳೂರಿನ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಬ್ರೇಕ್ ಫೇಲ್ ಆದಂತ ಪರಿಣಾಮ, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದಂತ ಜನರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದಂತ ಬಾಲಕಿ ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿದ್ದಾರೆ.
ಈ ಭೀಕರ ಅಪಘಾತದಲ್ಲಿ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದರೇ, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮೃತರಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಒಬ್ಬ ಬಾಲಕ ಸೇರಿದ್ದಾರೆ. ಮೃತರ ಬಗ್ಗೆ ಮಾಹಿತಿ ನಿರೀಕ್ಷಲಾಗಿದೆ.
ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ
ನಾಳೆ ರಾಜ್ಯಾಧ್ಯಂತ ‘ಗಾಂಧಿ ಮತ್ತು ನೋಟು’ ಚಿತ್ರ ಬಿಡುಗಡೆ: ತಪ್ಪದೇ ನೋಡುವಂತೆ ವಿ.ನಾಗೇಂದ್ರ ಪ್ರಸಾದ್ ಮನವಿ